ಕೂಚಹಳ್ಳಿ ಸರ್ಕಾರಿ ಶಾಲೆಯಲ್ಲಿ ಕಳ್ಳತನ

21 NMG 04 (2)
ನಾಗಮಂಗಲ ತಾಲೂಕಿನ ಬಿಂಡಿಗನವಿಲೆ ಹೋಬಳಿಯ ಕೂಚಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ಬೀಗ ಮುರಿದು ಎಲೆಕ್ಟ್ರಾನಿಕ್ ವಸ್ತುಗಳನ್ನು ಕಳವು ಮಾಡಿರುವುದು.
Published on

ನಾಗಮಂಗಲ: ತಾಲೂಕಿನ ಕೂಚಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ಕಳ್ಳರು ಮುಖ್ಯ ಶಿಕ್ಷಕರ ಕೊಠಡಿ ಸೇರಿದಂತೆ ಎಲ್ಲ ಕೊಠಡಿಗಳ ಬೀಗ ಮುರಿದು ಸ್ಮಾರ್ಟ್ ಬೋರ್ಡ್, ಟಿವಿ, ಎರಡು ಲ್ಯಾಪ್‌ಟ್ಯಾಪ್‌ಗಳನ್ನು ಕದ್ದೊಯ್ದಿದ್ದಾರೆ.

ಶನಿವಾರ ಎಂದಿನಂತೆ ಶಾಲೆ ಮುಗಿದ ನಂತರ ಕೊಠಡಿಗಳಿಗೆ ಬೀಗ ಹಾಕಲಾಗಿತ್ತು. ಆದರೆ ಸೋಮವಾರ ಶಾಲೆಗೆ ಹೋದಾಗ ಕಳ್ಳತನವಾಗಿರುವುದು ಬೆಳಕಿಗೆ ಬಂದಿದೆ. ತಕ್ಷಣ ಶಾಲೆಯ ಮುಖ್ಯಶಿಕ್ಷಕ ಬಿಂಡಿಗನವಿಲೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪೊಲೀಸರು ಶಾಲೆಗೆ ಭೇಟಿ ನೀಡಿ ಪರಿಶೀಲಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net