ಮಹಿಳೆ ಬ್ಯಾಗ್‌ನಿಂದ ಚಿನ್ನ ಎಗರಿಸಿದಾಕೆ ಸೆರೆ

New Project (25)
Published on

ಉಪ್ಪಿನಂಗಡಿ : ಕಳೆದ ಸೋಮವಾರ ಉಪ್ಪಿನಂಗಡಿಯ ಬಸ್ ನಿಲ್ದಾಣದಲ್ಲಿ ಮಹಿಳೆಯೋರ್ವರ ಬ್ಯಾಗಿನಿಂದ 114 ಗ್ರಾಮ್ ತೂಕದ ಚಿನ್ನಾಭರಣದ ಬಾಕ್ಸ್ ಎಗರಿಸಿದ್ದ ಪ್ರಕರಣವನ್ನು ಭೇದಿಸಿರುವ ಉಪ್ಪಿನಂಗಡಿ ಪೊಲೀಸರು ಬಂಟ್ವಾಳ ತಾಲೂಕು ಕೊಮಿನಡ್ಕ ಮನೆ ನಿವಾಸಿ ನಸೀಮಾ (31) ಎಂಬಾಕೆಯನ್ನು ಬಂಧಿಸಿ ಆಕೆಯಿಂದ ಕಳವಿಗೀಡಾದ ಎಲ್ಲ ಚಿನ್ನಾಭರಣವನ್ನು ವಶಪಡಿಸಿಕೊಂಡಿದ್ದಾರೆ.

ಕಡಬ ಬಂಟ್ರ ಗ್ರಾಮದ ನೆಕ್ಕಿತ್ತಡ್ಕ ಮನೆ ನಿವಾಸಿ ಅಬೀಬಾ ಎಂಬವರು ಹಸೀರಾಬಾನು ಎಂಬವರೊಂದಿಗೆ ಜ.6ರಂದು ಪೆರ್ನೆಗೆ ಮದುವೆಗೆ ಹೊರಡುವ ಸಮಯ 8 ಗ್ರಾಂ ತೂಕದ ಚಿನ್ನದ ನೆಕ್ಲೇಸ್ ಮತ್ತು ಹಸೀರಾಬಾನುರವರ 106 ಗ್ರಾಂ ಚಿನ್ನಾಭರಣವನ್ನು ಒಂದು ಬಾಕ್ಸ್‌ನೊಳಗಡೆ ಹಾಕಿ ವ್ಯಾನಿಟಿ ಬ್ಯಾಗಿನೊಳಗಡೆ ಇಟ್ಟುಕೊಂಡಿದ್ದರು. ಕಡಬಕ್ಕೆ ಹೋಗಲು ಮಧ್ಯಾಹ್ನ ಸರ್ಕಾರಿ ಬಸ್ಸಿಗೆ ಹತ್ತಿ ಬ್ಯಾಗ್‌ನಿಂದ ಐಡಿ ಕಾರ್ಡ್ ತೆಗೆಯಲೆಂದು ನೋಡಿದಾಗ ಚಿನ್ನ ಇಟ್ಟಿದ್ದ ಬಾಕ್ಸ್ ಕಳವಿಗೀಡಾಗಿತ್ತು. ಬ್ಯಾಗ್ ಕಳ್ಳತನವನ್ನೇ ಕಸುಬಾಗಿಸಿಕೊಂಡ ನಸೀಮಾಳನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆಗೆ ಒಳಪಡಿಸಿದಾಗ ಕಳ್ಳತನದ ಕೃತ್ಯವನ್ನು ಒಪ್ಪಿಕೊಂಡು ತನ್ನ ಸ್ಕೂಟಿಯಲ್ಲಿ ಅಡಗಿಸಿಟ್ಟಿದ್ದ ಚಿನ್ನಾಭರಣವನ್ನು ಪೊಲೀಸರ ವಶಕ್ಕೆ ಒಪ್ಪಿಸಿದ್ದಾಳೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net