

ಹುಬ್ಬಳ್ಳಿ: ಕೇಶ್ವಾಪುರದ ಬೆಳವಣಿಕಿ ಕಾಲನಿಯಲ್ಲಿ ದಾಖಲಾಗಿದ್ದ ಮನೆಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬನನ್ನು ಬಂಧಿಸುವಲ್ಲಿ ಕೇಶ್ವಾಪೂರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.
ಪೊಲೀಸ್ ಇನ್ಸ್ಪೆಕ್ಟರ್ ಯು.ಎಚ್. ಸಾತೇನಹಳ್ಳಿ ನೇತೃತ್ವದ ಅಧಿಕಾರಿಗಳ ತಂಡ ಬಂಧಿತನಿಂದ 2,52,500 ರೂ. ಮೌಲ್ಯದ 53 ಗ್ರಾಂ ಚಿನ್ನ, 60 ಗ್ರಾಂ ಬೆಳ್ಳಿ ಆಭರಣಗಳನ್ನು ಜಪ್ತಿ ಮಾಡಿದೆ.