ಮನೆಯಲ್ಲಿದ್ದ ಚಿನ್ನಾಭರಣ ಕಳವು
ವಿಜಯವಾಣಿ ಸುದ್ದಿಜಾಲ ನಾಪೋಕ್ಲು
ಕಕ್ಕಬ್ಬೆ ಸಮೀಪದ ಯವಕಪಾಡಿ ಗ್ರಾಮದ ಕರ್ತಂಡ ಮಾಚವ್ವ(ಮೀನಾ) ಅವರ ಮನೆಯಲ್ಲಿ ಕಳ್ಳತನವಾಗಿದೆ. ಮನೆಯಲ್ಲಿ ಒಬ್ಬರೇ ವಾಸವಿದ್ದ ಮಾಚವ್ವ ಕೆಲಸದ ನಿಮಿತ್ತ ಸಂಬಂಧಿಕರ ಮನೆಗೆ ತೆರಳಿದ್ದರು. ಈ ವೇಳೆ ಕಳ್ಳತನ ನಡೆದಿದ್ದು, ಮಂಗಳವಾರ ಅವರು ಮನೆಗೆ ಹಿಂದಿರುಗಿ ನೋಡಿದಾಗ ಕಳ್ಳತನವಾಗಿರುವುದು ಗೊತ್ತಾಗಿದೆ. ಬ್ಟ್ಠೀವಿನಲ್ಲಿದ್ದ 33 ಗ್ರಾಂ ಚಿನ್ನಾಭರಣವನ್ನು ಖದೀಮರು ದೋಚಿದ್ದು, ಸ್ಥಳಕ್ಕೆ ಬೆರಳಚ್ಚು ತಜ್ಞರು ಹಾಗೂ ಶ್ವಾನದಳದವರು ಆಗಮಿಸಿ ಪರೀಕ್ಷೆ ನಡೆಸಿದರು. ನಾಪೋಕ್ಲು ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.