ಕಾರು ಚಾಲನೆ ಮಾಡುತ್ತಿದ್ದ ರೋಹಿತ್‌ಗೆ ಆಯಾಸವಾಗಿ ನಿದ್ರೆ ಬಂದಿತ್ತೆನ್ನಲಾಗಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಎಲ್ಲರೂ ನಿದ್ರೆಗೆ ಜಾರಿದ್ದರು. ಈ ಹಿನ್ನೆಲೆಯಲ್ಲಿ ತಾಲೂಕಿನ ಹಳೇ ಬೂದನೂರು ಗ್ರಾಮದಿಂದ ಸ್ವಲ್ಪ ಮುಂದೆ ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿಯಲ್ಲಿ ಕಾರನ್ನು ರಸ್ತೆ ಬದಿಗೆ ನಿಲ್ಲಿಸಿ ರೋಹಿತ್ ಸಹ ನಿದ್ರೆಗೆ ಜಾರಿದ್ದರು. ಹೆದ್ದಾರಿಯ ನಿರ್ಜನ ಪ್ರದೇಶದಲ್ಲಿ ರಾತ್ರಿ ವೇಳೆ ಕಾರು ನಿಲ್ಲಿಸಿರುವುದನ್ನು ಕಂಡ ಮೂವರು ದುಷ್ಕರ್ಮಿಗಳು ಚಾಕು ತೋರಿಸಿ ಬೆದರಿಸಿ, ಅವರ ಬಳಿ ಇದ್ದ ೧೬ ಗ್ರಾಂ ತೂಕದ ಚಿನ್ನದ ಸರ, ಮೊಬೈಲ್ ಮತ್ತು ಅವರ ಬಳಿ ನಗದು ದೋಚಿ ಪರಾರಿಯಾಗಿದ್ದಾರೆ. ಸ್ಥಳಕ್ಕೆ ಮಂಡ್ಯ ಗ್ರಾಮಾಂತರ ಠಾಣೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದರು. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.