164 ಗ್ರಾಂ ಚಿನ್ನಾಭರಣ ಕಳ್ಳತನ

udp-9-theft
Published on

ಮೈಸೂರು: ಕೆಲಸ ಮಾಡುತ್ತಿದ್ದ ಮಾಲೀಕ ಮನೆಯಲ್ಲಿ ಕಳ್ಳತನ ಮಾಡಿದ್ದ ಆರೋಪಿಯನ್ನು ಉದಯಗಿರಿ ಪೊಲೀಸರು ಬಂಧಿಸಿದ್ದು, ಆತನಿಂದ 3.60 ಲಕ್ಷ ರೂ. ಮೌಲ್ಯದ 164 ಗ್ರಾಂ ಚಿನ್ನಾಭರಣ, 50 ಸಾವಿರ ರೂ. ನಗದನ್ನು ವಶ ಪಡಿಸಿಕೊಂಡಿದ್ದಾರೆ.


ಜೂ.20ರಂದು ಕೆ.ಎನ್.ಪುರದ ಪಿಎಫ್ ಕಚೇರಿ ರಸ್ತೆಯ 1ನೇ ಕ್ರಾಸ್‌ನ ಮನೆಯೊಂದರಲ್ಲಿ ಬೀರುವನ್ನು ಮೀಟಿ ಕಳ್ಳತನ ಮಾಡಲಾಗಿತ್ತು. ಪ್ರಕರಣ ದಾಖಲಿಸಿಕೊಂಡ ಉದಯಗಿರಿ ಪೊಲೀಸರು ತನಿಖೆ ಕೈಗೊಂಡರು.

ಮನೆ ಮಾಲೀಕರ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ತಮಿಳುನಾಡಿನ ಮೂಲದ ವ್ಯಕ್ತಿಯನ್ನು ವಿಚಾರಣೆಗೆ ಒಳಪಡಿಸಲಾಯಿತು. ಆರೋಪಿಯು ಕಳ್ಳತನ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net