ಕುದೂರು: ಸೋಲೂರು ಹೋಬಳಿಯ ಗುಡೇಮಾರನಹಳ್ಳಿ ಸಮೀಪದ ಪಣ್ಣಯ್ಯನಪಾಳ್ಯದ ಮಲ್ಲೆಶಯ್ಯ ಎಂಬುವವರ ಮನೆ ಮುಂದೆ ನಿಲ್ಲಿಸಿದ್ದ ಗೂಡ್ಸ್ ವಾಹನವನ್ನು ಬುಧವಾರ ಕಳ್ಳರು ಕದ್ದೊಯ್ದಿದ್ದಾರೆ. ಈ ಸಂಬಂಧ ವಾಹನ ಮಾಲೀಕ ಮಲ್ಲೆಶಯ್ಯ ಕುದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.