

ಹುಬ್ಬಳ್ಳಿ: ಬೆಂಗಳೂರು-ಹುಬ್ಬಳ್ಳಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಹುಬ್ಬಳ್ಳಿ ಕೇಶ್ವಾಪುರದ ಮಹಿಳಾ ಪ್ರಯಾಣಿಕರೊಬ್ಬರ ವ್ಯಾನಿಟಿ ಬ್ಯಾಗ್‌ನಲ್ಲಿದ್ದ 3.06 ಲಕ್ಷ ರೂ. ಮೌಲ್ಯದ ಚಿನ್ನಾಭರಣ, 2 ಮೊಬೈಲ್ಫೋನ್, 50 ಸಾವಿರ ರೂ. ನಗದು ಕಳವಾಗಿದೆ.
ವ್ಯಾನಿಟಿ ಬ್ಯಾಗ್‌ನಲ್ಲಿದ್ದ 36 ಗ್ರಾಂ ಚಿನ್ನಾಭರಣ, 46 ಸಾವಿರ ರೂ. ಹಾಗೂ 30 ಸಾವಿರ ರೂ. ಮೌಲ್ಯದ 2 ಮೊಬೈಲ್ ಫೋನ್ , 50 ಸಾವಿರ ರೂ. ನಗದು ಕಳವಾಗಿದೆ. ದಾವಣಗೆರೆ ರೈಲ್ವೆ ನಿಲ್ದಾಣದ ಹತ್ತಿರ ರೈಲು ಬಂದಾಗ ನೋಡಿದರೆ ಕಳವಾಗಿರುವುದು ಗೊತ್ತಾಗಿದೆ.
ಹುಬ್ಬಳ್ಳಿ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.