ಚಿನ್ನಾಭರಣ ದೋಚಿದ ಖದೀಮರು

08hgr 01
ಅಪರ ಜಿಲ್ಲಾ ಪೊಲೀಸ್ ವರಿಷ್ಠಧಿಕಾರಿ ಗಂಗಾಧರಸ್ವಾಮಿ,ಪಿಎಸ್ಐ ಬಿ.ಮಹೇಂದ್ರ ಸ್ಥಳಕ್ಕೆ ಭೇಟಿ ನೀಡಿರುವುದು.
Published on

ಹಲಗೂರು: ಸಮೀಪದ ಯತ್ತಂಬಾಡಿ ಗ್ರಾಮದಲ್ಲಿ ಬುಧವಾರ ತಡರಾತ್ರಿ ಮನೆಯ ಚಿಲಕ ಮುರಿದು ಒಳ ನುಗ್ಗಿರುವ ದುಷ್ಕರ್ಮಿಗಳು ಮನೆಯಲ್ಲಿದ್ದ ಚಿನ್ನಾಭಾರಣ ದೋಚಿ ಪರಾರಿಯಾದ್ದಾರೆ.

ಗ್ರಾಮದ ಪ್ರೇಮಾ ಅವರ ಮನೆಯಲ್ಲಿ ಕಳವು ನಡೆದಿದೆ. ಬುಧವಾರ ರಾತ್ರಿ ಊಟ ಮುಗಿಸಿ ಮನೆಯವರೆಲ್ಲ ಮಲಗಿದ್ದ ವೇಳೆ ಮನೆಯ ಹಿಂಬಾಗಿಲಿನ ಚಿಲಕ ಮುರಿದು ಒಳನುಗ್ಗಿರುವ ಕಳ್ಳರು ಬೀರು ಬಾಗಿಲು ತೆಗೆದು ಐದು ಲಕ್ಷ ರೂ. ಬೆಲೆ ಬಾಳುವ ಚಿನ್ನಾಭಾರಣಗಳನ್ನು ದೊಚಿ ಪರಾರಿಯಾಗಿದ್ದಾರೆ. ಸ್ಥಳಕ್ಕೆ ಅಪರ ಜಿಲ್ಲಾ ಪೊಲೀಸ್ ವರಿಷ್ಠ್ಠಾಧಿಕಾರಿ ಗಂಗಾಧರಸ್ವಾಮಿ, ಪಿಎಸ್‌ಐ ಮಹೇಂದ್ರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇದೇ ವೇಳೆ ಶ್ವಾನ ದಳ ಹಾಗೂ ಬೆರಳಚ್ಚು ತಜ್ಞರು ಆಗಮಿಸಿ ಪರಿಶೀಲಿಸಿದರು. ಈ ಸಂಬಂಧ ಹಲಗೂರು ಪೊಲೀಸ್ ಠಾಣೆಯಲ್ಲಿ ಗುರುವಾರ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net