ಕೆಂಪೇಗೌಡ ಥೀಮ್ ಪಾರ್ಕ್ ಪರಿಶೀಲನೆ

theem park
Published on

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶದಲ್ಲಿರುವ 108 ಅಡಿ ಎತ್ತರದ ನಾಡ ಪ್ರಭು ಕೆಂಪೇಗೌಡರ ಕಂಚಿನ ಪ್ರತಿಮೆ ಆವರಣದಲ್ಲಿ ನಡೆಯುತ್ತಿರುವ ಕೆಂಪೇಗೌಡ ಥೀಮ್ ಪಾರ್ಕ್ ಕಾಮಗಾರಿಯನ್ನು ಕಂದಾಯ ಸಚಿವ ಕೃಷ್ಣ ಬೈರೇಗೌಡ ಸೋಮವಾರ ಪರಿಶೀಲನೆ ನಡೆಸಿದರು.

ಕೆಂಪೇಗೌಡರ ಪ್ರತಿಮೆಯ ಸುತ್ತಲೂ 20 ಕೋಟಿ ರೂ.ವೆಚ್ಚದಲ್ಲಿ ಥೀಮ್ ಪಾರ್ಕ್ ನಿರ್ಮಾಣಗೊಳ್ಳುತ್ತಿದ್ದು, ಅಧಿಕಾರಿಗಳಿಂದ ನಿರ್ಮಾಣದ ಇಂಚಿಂಚು ಮಾಹಿತಿ ಪಡೆದರು. ಕಾಮಗಾರಿ ಗುಣಮಟ್ಟ ಕಾಪಾಡಿಕೊಂಡು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದ ಕಂದಾಯ ಸಚಿವರು ಮುಂದಿನ ನಾಲ್ಕು ತಿಂಗಳಲ್ಲಿ ಥೀಮ್ ಪಾರ್ಕ್ ಕಾಮಗಾರಿ ಪೂರ್ಣಗೊಳ್ಳುವ ಭರವಸೆ ಇದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net