

ಚಿಕ್ಕಮಗಳೂರು: ಹೆಣ್ಣು ಮಕ್ಕಳ ರಕ್ಷಣೆಗಾಗಿ ಹಲವಾರು ಕಾನೂನುಗಳಿದ್ದು, ಅವುಗಳನ್ನು ತಿಳಿದುಕೊಳ್ಳುವುದು ಬಹು ಮುಖ್ಯ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ವಿ. ಹನುಮಂತಪ್ಪ ತಿಳಿಸಿದರು.
ಸಖರಾಯಪಟ್ಟಣ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಿಂದ ಜಿಲ್ಲೆಯ ಬಿಳೇಕಲ್ಲಹಳ್ಳಿ ಗ್ರಾಮದಲ್ಲಿ ಆಯೋಜಿಸಿದ್ದ ಎನ್‌ಎಸ್‌ಎಸ್ ಶಿಬಿರದಲ್ಲಿ ಭಾಗವಹಿಸಿ ಮಾತನಾಡಿದ ಅವರು, ರಾಜ್ಯದ ವಿವಿಧಡೆಗೆ ಹೆಣ್ಣು ಭ್ರೂಣಹತ್ಯೆ ಹೆಚ್ಚಾಗುತ್ತಿದೆ. ಸ್ತಿçÃಯರ ರಕ್ಷಿಸಲು ಅನೇಕ ಕಾನೂನುಗಳಿದ್ದು, ಅವುಗಳನ್ನ ತಿಳಿದು ಜಾಗರೂಕರಾಗಬೇಕು. ಭ್ರೂಣಹತ್ಯೆ ಮಹಾಪಾಪ. ಪ್ರತಿಯೊಬ್ಬರಿಗೂ ಜೀವಿಸುವ ಹಕ್ಕಿದೆ. ಭ್ರೂಣ ಹತ್ಯೆಯೊಂದಿಗೆ ವರದಕ್ಷಿಣೆ ಕಿರುಕುಳ ಅತ್ಯಾಚಾರದಂತಹ ಘಟನೆಗಳು ಸಾಮಾಜಿಕ ಪಿಡುಗುಗಳಾಗಿ ಗೋಚರಿಸುತ್ತಿವೆ. ಹೆಣ್ಣು ಮಕ್ಕಳು ಕಾಯಿದೆ ಕಾನೂನುಗಳನ್ನು ಅರಿತುಕೊಳ್ಳುವುದು ಮುಖ್ಯ ಎಂದು ಹೇಳಿದರು.
ಸಖರಾಯಪಟ್ಟಣ ಪೊಲೀಸ್ ಠಾಣೆಯ ಉಪನಿರೀಕ್ಷಕ ಕಿರಣ್ ಕುಮಾರ್ ಪಿ. ಮಾತನಾಡಿ, ಇತ್ತೀಚಿನ ದಿನಗಳಲ್ಲಿ ರಸ್ತೆ ಅಪಘಾತಗಳು ಹೆಚ್ಚಾಗುತ್ತಿವೆ. ರಸ್ತೆ ಸುರಕ್ಷತಾ ನಿಯಮವನ್ನು ಪಾಲಿಸದಿರುವುದೇ ಇದರ ಮುಖ್ಯ ಕಾರಣ. ಪ್ರತಿಯೊಬ್ಬರು ರಸ್ತೆ ಸುರಕ್ಷತಾ ನಿಯಮ ಕಡ್ಡಾಯವಾಗಿ ಪಾಲಿಸಬೇಕು. ಜೊತೆಗೆ ಸೈಬರ್ ವಂಚನೆಗಳು ಹೆಚ್ಚಾಗುತ್ತಿದ್ದು, ಜನಸಾಮಾನ್ಯರು ಇದರ ಬಗ್ಗೆ ಜಾಗರೂಕರಾಗಿರಬೇಕು. ಯಾವುದೇ ಅಪರಿಚಿತ ವ್ಯಕ್ತಿಗಳು ಕೇಳುವ ಒಟಿಪಿ ಹಾಗೂ ಇನ್ನಿತರ ಮಾಹಿತಿಯನ್ನು ಹಂಚಿಕೊಳ್ಳದೆ ವಂಚನೆಗಳಿAದ ದೂರವಿರಬೇಕಯ ಎಂದರು.
ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಡಿ.ಬಿ. ಸುಜೇಂದ್ರ ಮಾತನಾಡಿ, ಅಪ್ರಾಪ್ತಾರ ಮೇಲಿನ ಅತ್ಯಾಚಾರದಂಥ ಘಟನೆಗಳು ಹೆಚ್ಚಾಗುತ್ತಿದ್ದು, ಇಂತಹ ಕೃತ್ಯಗಳಲ್ಲಿ ತೊಡಗಿದವರ ಮೇಲೆ ಪೋಕ್ಸೋದಂಥ ಕಾಯ್ದೆಯಡಿಯಲ್ಲಿ ಕಠಿಣ ಶಿಕ್ಷೆಗೆ ಒಳಪಡಿಸಲು ಅವಕಾಶವಿದೆ. ಸಂತ್ರಸ್ತರು ಯಾವುದೇ ಭಯವಿಲ್ಲದೆ ಮುಕ್ತವಾಗಿ ದೂರುಗಳನ್ನು ಸಲ್ಲಿಸಿ ನ್ಯಾಯ ಪಡೆದುಕೊಳ್ಳಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ನಿವೃತ್ತ ಶಿಕ್ಷಕರಾದ ಪಾಂಡುರAಗಪ್ಪ, ಎನ್‌ಎಸ್‌ಎಸ್ ಕಾರ್ಯಕ್ರಮಾಧಿಕಾರಿ ಟಿ.ವೆಂಕಟೇಶ, ಗ್ರಾಮಪಂಚಾಯಿತಿ ಅಧ್ಯಕ್ಷ ಭಾನುಪ್ರಕಾಶ್, ಉಪನ್ಯಾಸಕರಾದ ಡಾ. ವೀಣಾ, ಅಭಿಷೇಕ ಅಡ್ಡೇರ ಉಪಸ್ಥಿತರಿದ್ದರು.