

*ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಕೆ. ರಾಜು ಅಭಿಮತ
* ಜಿಲ್ಲಾಮಟ್ಟದ ಮಹಿಳಾ ಕ್ರೀಡಾಕೂಟಕ್ಕೆ ಚಾಲನೆ
ರಾಮನಗರ
ಆಧುನಿಕ ಮಹಿಳೆಯರು ಪುರುಷನಿಗೆ ಕಡಿಮೆ ಇಲ್ಲವೆಂಬಂತೆ ಎಲ್ಲ ರಂಗಗಳಲ್ಲಿ ಸಾಧನೆ ವಾಡಿ ವಿಶಿಷ್ಟ ಛಾಪು ಮೂಡಿಸಿದ್ದಾರೆ. ಜಿಲ್ಲಾಧಿಕಾರಿ, ಪೊಲೀಸ್ ಅಧಿಕಾರಿಗಳಾಗಿದ್ದಾರೆ. ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಅತ್ಯುತ್ತಮ ಸ್ಥಾನ ಅಲಂಕರಿಸಿದ್ದಾರೆ. ಇವರೆಲ್ಲರೂ ಮಹಿಳಾ ಸಾಧಕರಿಗೆ ಸ್ಫೂರ್ತಿಯಾಗಿರುವರು ಎಂದು ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಕೆ. ರಾಜು ಅಭಿಪ್ರಾಯಿಸಿದರು.
ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಪಂ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಶಾಲಾ ಶಿಕ್ಷಣ ಇಲಾಖೆ ಮತ್ತು ಕಾಲೇಜು ಶಿಕ್ಷಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಜಿಲ್ಲಾಮಟ್ಟದ ಮಹಿಳಾ ಕ್ರೀಡಾಕೂಟ ಉದ್ಘಾಟಿಸಿ ವಾತನಾಡಿದರು.
ಇಂದಿನ ಮಹಿಳೆಯರಿಗೆ ಎಲ್ಲ ರಂಗಗಳಲ್ಲಿಯೂ ಸಾಧನೆ ವಾಡಲು ಅಪಾರ ಅವಕಾಶಗಳಿವೆ. ಅವುಗಳನ್ನು ಬಳಸಿಕೊಂಡು ಸಾಧನೆ ವಾಡಬೇಕು ಎಂದರು ಹೇಳಿದರು.
ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜಿ.ಎನ್. ನಟರಾಜು ಗಾಣಕಲ್ ವಾತನಾಡಿ, ನಮ್ಮ ಸಂಸ್ಕೃತಿಯಲ್ಲಿ ಹೆಣ್ಣಿಗೆ ಅಪಾರವಾದ ಗೌರವವಿದೆ. ಮಹಿಳೆಯರು ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಜಯಶೀಲರಾಗಬೇಕು ಎಂದರು.
ಎನ್‌ಸಿಸಿ ಟಕದ ಪ್ರಾಂಶುಪಾಲರಾದ ಕ್ಯಾಪ್ಟನ್ ಲಕ್ಷ್ಮೀ ವಾತನಾಡಿ, ಇತ್ತೀಚಿನ ದಿನಗಳಲ್ಲಿ ಹೆಣ್ಣು ಮಕ್ಕಳು ದೇಶ ಕಾಯುವಂತಹ ಮಹತ್ವದ ಕೆಲಸಗಳಲ್ಲಿ ತೊಡಗಿದ್ದಾರೆ. ಒಲಿಂಪಿಕ್ ನಂತಹ ಕ್ರೀಡೆಗಳಲ್ಲಿ ಭಾಗವಹಿಸಿ ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ದೇಶಕ್ಕೆ ಕೀರ್ತಿ ತರುತ್ತಿದ್ದಾರೆ. ಹೆಣ್ಣು ಮಕ್ಕಳನ್ನು ಒಗ್ಗೂಡಿಸಲು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.
ವೃತ್ತ ನಿರೀಕ್ಷಕಿ ಶೋಭಾ ವಾತನಾಡಿದರು. ಕಾಲೇಜು ಶಿಕ್ಷಣ ಇಲಾಖೆ ಉಪನಿರ್ದೇಶಕಿ ನಾಗಮ್ಮ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಸತೀಶ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಆರ್.ಅನಿತಾ ಇತರರು ಇದ್ದರು.