

ಪಾಸ್‌ಪೋರ್ಟ್ ಸೇವಾ ಕೇಂದ್ರವು ಅಂಚೆ ಕಚೇರಿಯ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದೆ. ಹೀಗಾಗಿ ಮೃಗಾಲಯದ ಬಳಿ ಇರುವ ಕಟ್ಟಡವೊಂದಕ್ಕೆ ಸೇವಾಕೇಂದ್ರವನ್ನು ಸ್ಥಳಾಂತರ ಮಾಡುವ ಯೋಚನೆಯಿದೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದರು.
ನಗರದ ಮೇಟಗಳ್ಳಿಯಲ್ಲಿರುವ ಪಾಸ್‌ಪೋರ್ಟ್ ಸೇವಾ ಕೇಂದ್ರದಲ್ಲಿ ಹಿರಿಯ ನಾಗರಿಕರಿಗೆ ಹಾಗೂ ವಿಶೇಷ ಚೇತನರಿಗಾಗಿ ಆರಂಭಿಸಿರುವ ನೂತನ ಕೊಠಡಿಯನ್ನು ಶುಕ್ರವಾರ ಉದ್ಘಾಟಿಸಿ ಮಾತನಾಡಿದ ಅವರು, ಸ್ಥಳಾಂತರದಿಂದ ಜನಸಂಚಾರಕ್ಕೂ ಸಹಕಾರಿಯಾಗಲಿದೆ ಎಂದು ಹೇಳಿದರು.
ಪ್ರವಾಸಕ್ಕಾಗಿ ವಿದೇಶಕ್ಕೆ ತೆರಳುವವರ ಸಂಖ್ಯೆ ಹೆಚ್ಚುತ್ತಿದೆ. ಸೇವಾಕೇಂದ್ರದಲ್ಲಿ ದಿನವೊಂದಕ್ಕೆ 125 ಜನರಿಗೆ ಅಧಿಕಾರಿಗಳ ಭೇಟಿಗೆ ಅವಕಾಶ ನೀಡಲಾಗುತ್ತಿದೆ. ಸಾರ್ವಜನಿಕರ ಅನುಕೂಲಕ್ಕಾಗಿ ಪಾಸ್‌ಪೋರ್ಟ್ ಸೇವಾ ಕೇಂದ್ರದಲ್ಲಿ ಹಿರಿಯ ನಾಗರಿಕರಿಗೆ ಹಾಗೂ ವಿಶೇಷ ಚೇತನರಿಗಾಗಿ ಪ್ರತ್ಯೇಕ ಕೊಠಡಿಗೆ ವ್ಯವಸ್ಥೆ ಕಲ್ಪಿಸಲಾಗಿದ್ದು, ಇದರಿಂದ ಕಚೇರಿಯ ಹೊರೆ ಕಡಿಮೆಯಾಗಲಿದೆ ಎಂದು
ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಎಸ್.ಟಿ.ರವಿಕುಮಾರ್, ಪ್ರಧಾನ ಕಾರ್ಯದರ್ಶಿ ಸುಬ್ರಹ್ಮಣ್ಯ, ಅಧಿಕಾರಿಗಳಾದ ಎನ್.ಮೋಹನ್, ದರ್ಶನ್, ವಿನಯ್ ಇದ್ದರು.