ಸಚಿವ ಸ್ಥಾನ ಸಿಗುವ ಭರವಸೆ ಇದೆ

saleem ahmad latest
Published on

ಹುಬ್ಬಳ್ಳಿ: ಬಿಹಾರ ಚುನಾವಣೆಯ ಬಳಿಕ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಲಿದ್ದು, ಈ ಬಾರಿ ನನಗೂ ಸಚಿವ ಸ್ಥಾನ ಸಿಗುವ ಭರವಸೆ ಇದೆ ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ಸರ್ಕಾರದ ಮುಖ್ಯ ಸಚೇತಕ ಸಲೀಂ ಅಹ್ಮದ ಹೇಳಿದರು.

ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎರಡೂವರೆ ವರ್ಷಗಳ ಹಿಂದೆ ಕಾಂಗ್ರೆಸ್ ಸರ್ಕಾರ ಅಧಿಕಾರ ಬಂದಾಗಲೇ ನನಗೆ ಸಚಿವ ಸ್ಥಾನ ದೊರೆಯಬೇಕಿತ್ತು. ಆದರೆ ಏಕೇ ಕೈಬಿಟ್ಟರೋ ಗೊತ್ತಿಲ್ಲ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲು ಕೆಪಿಸಿಸಿ ಕಾರ್ಯಾಧ್ಯಕ್ಷನಾಗಿ ಉತ್ತಮ ಕೆಲಸ ಮಾಡಿದ್ದೇನೆ. ನನ್ನೊಂದಿಗೆ ಕಾರ್ಯಾಧ್ಯಕ್ಷರಾದ ಮೂವರಿಗೆ ಸಚಿವ ಸ್ಥಾನ ದೊರೆಕಿದೆ. ಈಗ ನನಗೆ ಸಿಗವ ಭರವಸೆ ಇದೆ ಎಂದರು.

ಈಗ ಸಚಿವ ಸಂಪುಟ ವಿಸ್ತರಣೆ ಮಾಡಲು ಪಕ್ಷದ ವರಿಷ್ಠರು ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ಧರಿಸಿದ್ದಾರೆ. ಈಗಿರುವ ಸಚಿವರನ್ನು ಬಿಟ್ಟು ಹೊಸಬರಿಗೆ ಅವಕಾಶ ಸಿಗುವ ವಿಶ್ವಾಸವಿದೆ. ಅಧಿಕಾರ ಏಕಾಏಕಿ ದೊರೆಯುವುದಿಲ್ಲ ಎಂಬುದು ನನ್ನ ಅನುಭವಕ್ಕೆ ಬಂದಿದೆ. ಎಲ್ಲದಕ್ಕೂ ಕಾಯಬೇಕು ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net