ಕಾಮಗಾರಿಯ ಗುಣಮಟ್ಟದಲ್ಲಿ ರಾಜಿ ಇಲ್ಲ

ಕಾಮಗಾರಿಯ ಗುಣಮಟ್ಟದಲ್ಲಿ ರಾಜಿ ಇಲ್ಲ
Published on

ಹನಗೋಡು: ಕ್ಷೇತ್ರದಲ್ಲಿ ರಸ್ತೆ, ಕುಡಿಯುವ ನೀರು, ಸಾರಿಗೆ, ವಿದ್ಯುತ್ ಸೇರಿದಂತೆ ಮೂಲ ಸೌಕರ್ಯ ಕಲ್ಪಿಸಲು ಶ್ರಮಿಸುವುದಾಗಿ ಶಾಸಕ ಜಿ.ಡಿ.ಹರೀಶ್‌ಗೌಡ ಹೇಳಿದರು.

ಹನಗೋಡು ಹೋಬಳಿಯ ವೀರನಹೊಸಹಳ್ಳಿ ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆಯಿಂದ 2.5 ಕೋಟಿ ರೂ. ವೆಚ್ಚದಲ್ಲಿ ಕೈಗೊಂಡಿರುವ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಬುಧವಾರ ಭೂಮಿಪೂಜೆ ನೆರವೇರಿಸಿ ಮಾತನಾಡಿದರು. ನಮ್ಮ ಅವಧಿಯಲ್ಲಿ ನಡೆಯುವ ಕಾಮಗಾರಿಗಳ ಗುಣಮಟ್ಟದಲ್ಲಿ ರಾಜಿ ಮಾಡಿಕೊಳ್ಳುವುದಿಲ್ಲ. ಕಾಮಗಾರಿ ನಡೆಯುವ ಜಾಗಕ್ಕೆ ಇಂಜಿನಿಯರ್‌ಗಳು ಪ್ರತಿದಿನ ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಎಂದು ಹೇಳಿದರು.

ದೊಡ್ಡಹೆಜ್ಜೂರು ಗ್ರಾ.ಪಂ. ಅಧ್ಯಕ್ಷೆ ಅಂಬಿಕಾ, ಉಪಾಧ್ಯಕ್ಷ ಭರತವಾಡಿ ವೆಂಕಟೇಶ್, ಸುಭಾಷ್, ಜಿ.ಪಂ. ಮಾಜಿ ಸದಸ್ಯ ಸುರೇಂದ್ರ, ಶಿವಶಂಕರ್, ನಟರಾಜ್, ಹರವೆ ಶ್ರೀಧರ್, ಎಇಇ ಭೋಜರಾಜ್, ಇಂಜಿನಿಯರ್ ಪ್ರಭಾಕರ್, ಸತೀಶ್, ಪಾಪಣ್ಣ, ರಾಜೇಗೌಡ, ಶ್ರೀನಿವಾಸ್, ಕುಮಾರ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net