ತೆರಿಗೆ ವಸೂಲಿಗೆ ತಕ್ಕಂತೆ ಸೌಲಭ್ಯವಿಲ್ಲ

FotoJet (1)
Published on

ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ | ಅಡುಗೆ ಅನಿಲ, ತೈಲ ಬೆಲೆ ಹೆಚ್ಚಳಕ್ಕೆ ವಿರೋಧ

ಚಿಕ್ಕಬಳ್ಳಾಪುರ : ಖಾಲಿ ಅಡುಗೆ ಅನಿಲ ಸಿಲಿಂಡರ್, ಭಿತ್ತಿಪತ್ರಗಳೊಂದಿಗೆ ಪ್ರತಿಭಟಿಸುವ ಮೂಲಕ ಬೆಲೆ ಏರಿಸಿದ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ಶುಕ್ರವಾರ ಪ್ರತಿಭಟನಾ ಮೆರವಣಿಗೆ ಹೊರಟ ಕಾರ್ಯಕರ್ತರು ಅಂಬೇಡ್ಕರ್ ವೃತ್ತದಲ್ಲಿ ರಸ್ತೆತಡೆ ನಡೆಸಿ, ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು.ಕೇಂದ್ರದ ಬಿಜೆಪಿ ಸರ್ಕಾರವು ಅಧಿಕಾರಕ್ಕೆ ಬಂದಾಗಿನಿಂದಲೂ ನಿರಂತರವಾಗಿ ಬೆಲೆ ಏರಿಕೆ ಆಗುತ್ತಿದೆ. ಪೆಟ್ರೋಲ್, ಡಿಸೇಲ್, ಅಡುಗೆ ಅನಿಲ ಸಿಲಿಂಡರ್, ರಸಗೊಬ್ಬರದ ಜತೆಗೆ ಅಗತ್ಯವಸ್ತುಗಳ ದರವು ನಿರೀಕ್ಷೆಗೂ ಮೀರಿ ಹೆಚ್ಚಳವಾಗಿದೆ. ಇದರಿಂದ ಸಾಮಾನ್ಯಜನರು ಜೀವನ ನಡೆಸಲು ಪರದಾಡುವಂತಾಗಿದೆ. ಇದನ್ನರಿತು ರಾಜ್ಯ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳ ಮೂಲಕ ಉಚಿತ ಸೌಲಭ್ಯವನ್ನು ಒದಗಿಸಿ ಜನರ ಆರ್ಥಿಕ ಸಂಕಷ್ಟದ ಹೊರೆಯನ್ನು ತಗ್ಗಿಸಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಎನ್.ಕೇಶವರೆಡ್ಡಿ ತಿಳಿಸಿದರು.ಕೇಂದ್ರ ಸರ್ಕಾರ ಜನರಿಂದ ದುಬಾರಿ ತೆರಿಗೆ ವಸೂಲಿ ಮಾಡುತ್ತಿದ್ದರೂ ನಿರೀಕ್ಷೆಗೆ ಅನುಗುಣವಾಗಿ ಸವಲತ್ತುಗಳನ್ನು ಒದಗಿಸುತ್ತಿಲ್ಲ. ಆದರೆ, ಬಂಡವಾಳ ಶಾಹಿಗಳಿಗೆ ಅನುಕೂಲಕರ ನೀತಿಗಳ ಮೂಲಕ ಆದಾಯ ಹೆಚ್ಚಿಸಿಕೊಳ್ಳಲು ನೆರವಾಗುತ್ತಿದೆ ಎಂದು ಆರೋಪಿಸಿದರು.ಜಿಪಂ ಮಾಜಿ ಸದಸ್ಯ ಕೆ.ಎಂ.ಮುನೇಗೌಡ ಮಾತನಾಡಿ, ರಾಜ್ಯದಲ್ಲಿ ಬಿಜೆಪಿ ಜನಾಕ್ರೋಶ ಹೋರಾಟವನ್ನು ನಡೆಸುತ್ತಿರುವುದು ಹಾಸ್ಯಾಸ್ಪದ. ಮೊದಲು ಕೇಂದ್ರದ ಮೇಲೆ ಬೆಲೆ ಏರಿಕೆ ನಿಯಂತ್ರಣ, ಕರ್ನಾಟಕಕ್ಕೆ ನಿಯಮಾನುಸಾರ ಜಿಎಸ್‌ಟಿ ಪಾಲು ಮತ್ತು ಅಗತ್ಯ ಅನುದಾನ, ವಿವಿಧ ಯೋಜನೆಗಳ ಜಾರಿಗೆಗೆ ಒತ್ತಡ ಹೇರಲಿ ಎಂದು ಸವಾಲೆಸೆದರು.ಪ್ರತಿಭಟನೆಯಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಯಲುವಹಳ್ಳಿ ಎನ್.ರಮೇಶ್, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಕುಬೇರ್ ಅಚ್ಚು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಯರಾಂ ಮತ್ತಿತರರು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net