ಇ-ಕೆವೈಸಿ ಮಾಡಿಸಲು ದಿನಾಂಕ ನಿಗದಿ ಇಲ್ಲ

E-KYC Gas Subsidy mandya
Published on

ಮೈಸೂರು: ಗ್ರಾಹಕರು ಇ-ಕೆವೈಸಿ ಮಾಡಿಸಲು ಕೇಂದ್ರ ಸರ್ಕಾರವು ಅನಿಲ ಕಂಪನಿಗಳು ಕೊನೆಯ ದಿನಾಂಕವನ್ನು ನಿಗದಿ ಪಡಿಸಿಲ್ಲ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಜಂಟಿ ನಿರ್ದೇಶಕಿ ಕುಮುದಾ ಸ್ಪಷ್ಟಪಡಿಸಿದ್ದಾರೆ.


ಅಡುಗೆ ಅನಿಲ ಸಂಪರ್ಕ ಹೊಂದಿರುವ ಗ್ರಾಹಕರು ಡಿ.31ರ ಒಳಗೆ ತಮ್ಮ ಅಡುಗೆ ಅನಿಲ ಗ್ರಾಹಕ ಸಂಖ್ಯೆಗೆ ಇ-ಕೆವೈಸಿಯನ್ನು ಮತ್ತು ಬ್ಯಾಂಕ್ ಖಾತೆಯ ಮಾಹಿತಿಯನ್ನು ಗ್ಯಾಸ್ ಏಜೆನ್ಸಿಯಲ್ಲಿ ಸಲ್ಲಿಸಬೇಕು. ತಪ್ಪಿದ್ದಲ್ಲಿ ಅಂತಹ ಗ್ರಾಹಕರಿಗೆ ಸಹಾಯಧನ ನಿಲ್ಲುತ್ತದೆ, ಕಮರ್ಷಿಯಲ್ ಗ್ಯಾಸ್ ಆಗಿ ಪರಿವರ್ತನೆಯಾಗುತ್ತದೆ. ಅನಿಲದ ಸಂಪರ್ಕ ಕಡಿತವಾಗುತ್ತದೆ. ಹಾಗೇ ಈ ಕಾರ್ಯಕ್ಕೆ ಹಣ ನೀಡಬೇಕೆಂಬ ವದಂತಿ ಸಾರ್ವಜನಿಕ ವಲಯದಲ್ಲಿ ಗೊಂದಲ ಸೃಷ್ಟಿಗೆ ಕಾರಣವಾಗಿರುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಇದು ಕೇವಲ ವದಂತಿಯಾಗಿದ್ದು, ಗ್ರಾಹಕರು ಇ-ಕೆವೈಸಿ ಮಾಡಿಸಲು ಕೇಂದ್ರ ಸರ್ಕಾರವು, ಅನಿಲ ಕಂಪನಿಗಳು ಯಾವುದೇ ಕೊನೆಯ ದಿನಾಂಕ ನಿಗದಿ ಮಾಡಿಲ್ಲ. ಇ-ಕೆವೈಸಿ ಮಾಡಿಸುವುದಕ್ಕೂ ಯಾವುದೇ ಶುಲ್ಕ ನಿಗದಿ ಪಡಿಸಿರುವುದಿಲ್ಲ. ಅದು ಉಚಿತವಾಗಿರುತ್ತದೆ ಎಂದು ತಿಳಿಸಿದ್ದಾರೆ


ಇ-ಕೆವೈಸಿ ಮಾಡಿಸುವುದು ನಿರಂತರ ಪ್ರಕ್ರಿಯೆಯಾಗಿದ್ದು, ಪ್ರಧಾನ ಮಂತ್ರಿ ಉಜ್ವಲ್ ಯೋಜನೆ ಅಡಿ ಅಡುಗೆ ಅನಿಲ ಸಂಪರ್ಕ ಪಡೆದವರು ಮತ್ತು ಸಹಾಯಧನ ಪಡೆಯುವ ಗ್ರಾಹಕರು ಮಾತ್ರ ಇ-ಕೆವೈಸಿಯನ್ನು ಆದ್ಯತೆ ಮೇಲೆ ನೀಡುವಂತೆ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net