ಸಮಸ್ಯೆ ಬಗೆಹರಿಸಲು ಪ್ರಾಮಾಣಿಕ ಯತ್ನ ನಡೆಸಿಲ್ಲ

vatal nagaraj (vatal party)
Published on

ಮೈಸೂರು: ಕ್‌ಡೌನ್‌ನಿಂದಾಗಿ ಕಾರ್ಮಿಕ ವರ್ಗ ಸಾಕಷ್ಟು ಸಂಕಷ್ಟ ಎದುರಿಸುವಂತಾಗಿದ್ದು, ಅವರ ಸಮಸ್ಯೆ ಬಗೆಹರಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪ್ರಾಮಾಣಿಕ ಪ್ರಯತ್ನ ಮಾಡುತ್ತಿಲ್ಲ ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಅಸಮಾಧಾನ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಲಕ್ಷಾಂತರ ಕಾರ್ಮಿಕರು ಉದ್ಯೋಗ ಕಳೆದುಕೊಂಡಿದ್ದು, ಅವರ ಸಮಸ್ಯೆ ಬಗೆಹರಿಸಲು ಪರಿಣಾಮಕಾರಿ ಕ್ರಮ ಅಗತ್ಯ ವಿತ್ತು. ಆದರೆ, ಆ ನಿಟ್ಟಿನಲ್ಲಿ ಕೆಲಸವಾಗಿಲ್ಲ ಎಂದು ಭಾನುವಾರ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದರು.

ಕೇಂದ್ರ ಸರ್ಕಾರದ 20 ಲಕ್ಷ ಕೋಟಿ ರೂ. ಪ್ಯಾಕೇಜ್ ಸ್ವಾಗತಾರ್ಹ. ಆದರೆ ಆಯಾ ರಾಜ್ಯ ಸರ್ಕಾರಗಳ ಮೂಲಕ ಪ್ಯಾಕೇಜ್ ಹಂಚಿಕೆ ಮಾಡದೆ ಕೇಂದ್ರವೇ ನೇರವಾಗಿ ಹಂಚಿಕೆ ಮಾಡಿದ ಕ್ರಮ ಸರಿಯಲ್ಲ. ಇದು ಪ್ರಜಾಪ್ರಭುತ್ವ ಹಾಗೂ ಒಕ್ಕೂಟದ ವ್ಯವಸ್ಥೆಯಲ್ಲಿ ರಾಜ್ಯ ಸರ್ಕಾರಗಳನ್ನು ಕಡೆಗಣಿಸಿದಂತೆ ಆಗಿದೆ ಎಂದು ಹೇಳಿದರು.

ಭೇಟಿ: ನಗರದ ಜಯಲಕ್ಷ್ಮೀಪುರಂನಲ್ಲಿರುವ ಸಂಸದ ವಿ.ಶ್ರೀನಿವಾಸ ಪ್ರಸಾದ್ ನಿವಾಸಕ್ಕೆ ವಾಟಾಳ್ ನಾಗರಾಜ್ ಭೇಟಿ ನೀಡಿ, ಮಾತುಕತೆ ನಡೆಸಿದರು.

‘ಪ್ರಸಾದ್ ಅವರನ್ನು ಭೇಟಿ ಮಾಡಿ ಬಹಳ ದಿನಗಳಾಗಿದ್ದವು. ಅವರ ಆರೋಗ್ಯ ವಿಚಾರಿಸಲು ಬಂದಿದ್ದೆ. ಸುಮಾರು 55 ವರ್ಷಗಳ ಸ್ನೇಹ ನಮ್ಮದು. ಅವರು ಚುನಾವಣೆಗೆ ಸ್ಪರ್ಧಿಸಿದ ಸಂದರ್ಭಗಳಲ್ಲಿ ಬೆಂಬಲವಾಗಿ ನಿಂತಿದ್ದು ಮಾತ್ರವಲ್ಲದೆ, ಅವರ ಪರವಾಗಿ ಭಾಷಣ ಮಾಡಿದ್ದೆ’ ಎಂದು ವಾಟಾಳ್ ನಾಗರಾಜ್ ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net