ಮೈಸೂರಿನ ನಿವೇಶನ ರಹಿತರ ಹೋರಾಟದ ಬಗ್ಗೆ ಮಾಹಿತಿಯೇ ಇಲ್ಲ : ಸಚಿವ ಸೋಮಶೇಖರ್

SOMASHEKAR ST
Published on

ಮೈಸೂರು: ಹಕ್ಕುಪತ್ರ ನೀಡುವಂತೆ ಒತ್ತಾಯಿಸಿ ಏಕಲವ್ಯ ನಗರದ ಅಲೆಮಾರಿ ಸಮುದಾಯದವರು ಒಂದೂವರೆ ತಿಂಗಳಿಂದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಗುಡಿಸಲು ನಿರ್ಮಾಣ ಮಾಡಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಹೋರಾಟದ ಕುರಿತು ನನಗೆ ಮಾಹಿತಿಯೇ ಇಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಹೇಳಿದರು.

ಏಕಲವ್ಯ ನಗರದ ಜನರ ಸಮಸ್ಯೆಗಳನ್ನು ಬಗೆ ಹರಿಸಲು ನೂತನ ಜಿಲ್ಲಾಧಿಕಾರಿ ಕೆ.ವಿ.ರಾಜೇಂದ್ರ ಸಮರ್ಥರಿದ್ದಾರೆ. ಅವರಿಗೆ ಸಮಸ್ಯೆ ಬಗೆ ಹರಿಸುವಂತೆ ಸೂಚನೆ ನೀಡಲಾಗಿದ್ದು, ಅವರು ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆ ಎಂದು ಹೆಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net