

ಶಿವಮೊಗ್ಗ: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬಿಜೆಪಿಗೆ ಸೇರ್ಪಡೆ ಆಗುತ್ತಾರೆಂಬ ವದಂತಿಗೆ ಬಣ್ಣ ಕಟ್ಟುವ ಅವಶ್ಯಕತೆ ಇಲ್ಲ. ಡಿ.ಕೆ.ಶಿವಕುಮಾರ್ ಅವರು ಯಾವ ಪಕ್ಷಕ್ಕೂ ಹೋಗುವುದಿಲ್ಲ ಎಂದು ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು.
ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾಯನಾಡಿದ ಅವರು, ಕಾಂಗ್ರೆಸ್ ಪಕ್ಷವನ್ನು ಕಟ್ಟಿ ಬೆಳೆಸಿದ ಅವರು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದ ಮೇಲೆ ಹೊಸ ಸಂಚಲನ ಮೂಡಿದೆ. ಇಡೀ ರಾಷ್ಟ್ರ ನೋಡುವಂತೆ ಕಾಂಗ್ರೆಸ್ ಪಕ್ಷವನ್ನು ಕಟ್ಟಿದ್ದಾರೆ. ಹಾಗಾಗಿ ಕಾಂಗ್ರೆಸ್ ಅನ್ನು ಬಿಟ್ಟು ಹೋಗುವ ಸಂದರ್ಭ ಎಲ್ಲೂ ಇಲ್ಲ. ಆದರೆ ಪ್ರತಿಪಕ್ಷದವರು ಸುಮ್ಮನೆ ರಾಜಕೀಯವಾಗಿ ಮಾತನಾಡುತ್ತಿದ್ದಾರೆ ಎಂದರು.
ನಾವೆಲ್ಲರೂ ಹಿಂದುಗಳಿದ್ದೇವೆ. ಈ ದೇಶದಲ್ಲಿ ಹಿಂದು, ಮುಸ್ಲಿಂ, ಕ್ರೈಸ್ತರು, ಬೌದ್ಧರು ಎಲ್ಲರೂ ಇದ್ದೇವೆ. ಭಾರತ ಒಂದು ಜಾತ್ಯಾತೀತ ರಾಷ್ಟ್ರವಾಗಿದೆ. ಅವರಿಗೆ ಬೇಕಾದ ಧರ್ಮವನ್ನು ಅವರು ಆಚರಣೆ ಮಾಡಬಹುದು. ಅವರುಗಳು ಅವರ ದೇವರ ಕಾರ್ಯಗಳಿಗೆ ಹೋಗುವುದು ಒಂದು ಸಾಮಾನ್ಯ. ಇದಕ್ಕೆ ವಿಶೇಷ ಅರ್ಥ ಕಲ್ಪಿಸುವ ಅವಶ್ಯಕತೆ ಇಲ್ಲ ಎಂದರು.