ಸಿಎಂ ಬೆಳಗಾವಿಗೆ ಬಂದಿದ್ದಕ್ಕೆ ಹೊಸ ಅರ್ಥ ಬೇಡ

IMG20240826195841.jpg
Published on

ಬೆಳಗಾವಿ: ಕೊಲೆ ಆರೋಪಿ ನಟ ದರ್ಶನ್‌ಗೆ ಜೈಲಿನಲ್ಲಿ ರಾಜ್ಯಾತಿಥ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಲೋಕೋಪಯೋಗಿ ಸಚಿವ ಸತೀಶ ಜಾರಕೊಹೊಳಿ ಎಲ್ಲದಕ್ಕೂ ಉತ್ತರ ಕೊಡಲು ಆಗುವುದಿಲ್ಲ. ಅದು ಸಾರ್ವಜನಿಕ ಹಿತಾಸಕ್ತಿ ವಿಷಯವೇ ಅಲ್ಲ. ಈ ಕುರಿತು ಕ್ರಮ ವಹಿಸಲು ಸಂಬಂಧಿಸಿದ ಅಧಿಕಾರಿಗಳಿದ್ದಾರೆ ಎಂದಿದ್ದಾರೆ.

ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದರು. ಮುಖ್ಯಮಂತ್ರಿ ಬೆನ್ನಿಗೆ ಜಾರಕಿಹೊಳಿ ಸಹೋದರರು ನಿಂತಿದ್ದಾರಾ? ಅದಕ್ಕಾಗಿಯೇ ಸಿಎಂ ಗೋಕಾಕ, ಬೆಳಗಾವಿಗೆ ಬರುತ್ತಿದ್ದಾರೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಅದಕ್ಕೂ, ಇದಕ್ಕೂ ಸಂಬಂಧವಿಲ್ಲ. ಬಹಳ ದಿನಗಳಿಂದ ಬರಬೇಕಿತ್ತು. ಬರುತ್ತಿದ್ದಾರೆ ಅಷ್ಟೇ ಎಂದರು.

ಕಾಂಗ್ರೆಸ್ ಶಾಸಕರಿಗೆ 100 ಕೋಟಿ ರೂ. ಹಣದ ಆಮಿಷ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಈ ವಿಷಯ ಬಗ್ಗೆ ನನಗೆ ಮಾಹಿತಿ ಇಲ್ಲ. ಆಪರೇಷನ್ ಕಮಲ ಮುಗಿದ ಅಧ್ಯಾಯ ಎಂದರು. ಕಾಂಗ್ರೆಸ್‌ನಲ್ಲೇ ಸಿಎಂ ಅವರನ್ನು ಕಟ್ಟಿ ಹಾಕುತ್ತಿದ್ದಾರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಈಗ ಎಲ್ಲರೂ ಸಿಎಂ ಪರವಾಗಿಯೇ ಇದ್ದಾರೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net