ಮೋದಿ ಸಂಪುಟದಲ್ಲಿ ದಲಿತರು, ಹಿಂದುಳಿದವರಿಗೆ ಇಲ್ಲ ಸ್ಥಾನ : ಹಿಂದುಳಿದ ವರ್ಗಗಳ ಮುಖಂಡ ಕೆ.ಎಸ್. ಶಿವರಾಮ್ ಆಕ್ರೋಶ

pm modi
Published on

ಮೈಸೂರು: ಕೇಂದ್ರ ಸರ್ಕಾರದ ನೂತನ ಸಚಿವ ಸಂಪುಟದಲ್ಲಿ ದಲಿತರು ಮತ್ತು ಹಿಂದುಳಿದ ವರ್ಗದವರಿಗೆ ಅವಕಾಶ ನೀಡದೆ ಅನ್ಯಾಯ ಮಾಡಲಾಗಿದೆ ಎಂದು ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಅಧ್ಯಕ್ಷ ಕೆ.ಎಸ್. ಶಿವರಾಮ್ ಆಕ್ರೋಶ ವ್ಯಕ್ತಪಡಿಸಿದರು.

ಕೇಂದ್ರ ಸಚಿವ ಸಂಪುಟದಲ್ಲಿ ಮೇಲ್ವರ್ಗದವರಿಗೆ ಹೆಚ್ಚಿನ ಅವಕಾಶ ನೀಡಲಾಗಿದೆ. ರಾಜ್ಯದಿಂದ ಅಯ್ಕೆಯಾದವರಲ್ಲಿ ಒಕ್ಕಲಿಗರು, ಬ್ರಾಹ್ಮಣರಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಪ್ರತಿಯೊಂದು ವರ್ಗದವರಿಗೂ ಸಚಿವ ಸಂಪುಟದಲ್ಲಿ ಆದ್ಯತೆ ನೀಡಬೇಕಾಗಿತ್ತು ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು. ಸುದ್ದಿಗೋಷ್ಠಿಯಲ್ಲಿ ವೇದಿಕೆ ಪದಾಧಿಕಾರಿಗಳಾದ ಪ್ರಕಾಶ್, ಲೋಕೇಶ್ ಮಾದಪುರ, ಯೋಗೇಶ್ ಉಪ್ಪಾರ, ಮೊಗ್ಗಣ್ಣಾಚಾರ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net