ರಾಜ್ಯ ಸರ್ಕಾರಕ್ಕೆ ಸದ್ಯಕ್ಕೆ ತೊಂದರೆ ಇಲ್ಲ :  ಕೋಡಿಮಠ ಶ್ರೀ ಭವಿಷ್ಯ

New Kodihalli New
Published on

ಹುಬ್ಬಳ್ಳಿ: ರಾಜ್ಯ ಸರ್ಕಾರಕ್ಕೆ ಸದ್ಯಕ್ಕೆ ಯಾವುದೇ ತೊಂದರೆ ಇಲ್ಲ ಎಂದು ಭವಿಷ್ಯ ನುಡಿದಿರುವ ಹಾರನಳ್ಳಿ ಕೋಡಿಮಠದ ಜಗದ್ಗುರು ಡಾ. ಶಿವಾನಂದ ಶಿವಯೋಗಿ ರಾಜಯೋಗೀಂದ್ರ ಸ್ವಾಮೀಜಿ, ಯುಗಾದಿ ನಂತರ ಎಲ್ಲವನ್ನೂ ಹೇಳುತ್ತೇನೆ ಎಂದಿದ್ದಾರೆ.

ಇಲ್ಲಿನ ಶ್ರೀ ಸಿದ್ಧಾರೂಢ ಮಠದಲ್ಲಿ ಆಯೋಜಿಸಿರುವ ವಿಶ್ವ ವೇದಾಂತ ಪರಿಷತ್ತು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಶ್ರೀಗಳು, ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.

ವರ್ಷದ ಮಧ್ಯದಲ್ಲಿ ಭವಿಷ್ಯ ಹೇಳಲು ಬರುವುದಿಲ್ಲ. ಹೀಗಾಗಿ, ಯುಗಾದಿಗೆ ಎಲ್ಲವನ್ನೂ ಹೇಳುತ್ತೇನೆ. ಬರುವ ದಿನಗಳು ಶುಭ ಹಾಗೂ ಅಶುಭಗಳಿಂದ ಕೂಡಿವೆ. ಇದಕ್ಕೂ ಮೈಲಾರ ಕಾರ್ಣಿಕಕ್ಕೂ ಸಂಬಂಧ ಇಲ್ಲ ಎಂದರು.

ಬರುವ ದಿನಗಳಲ್ಲಿ ಭೂಮಿಯಲ್ಲಿ ಧಗೆ ಹೆಚ್ಚಾಗಲಿದೆ ಎಂದ ಶ್ರೀಗಳು, ರಾಜ್ಯ ಸರ್ಕಾರದ ಜನಪ್ರತಿನಿಧಿಗಳ ಕಿತ್ತಾಟದ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಲು ನಿರಾಕರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net