

ಮಡಿಕೇರಿ: ಜಿಲ್ಲಾಡಳಿತ ಭವನಕ್ಕೆ ಯಾವುದೇ ರೀತಿ ತೊಂದರೆ ಇಲ್ಲ ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಿಲ್ಲಾಡಳಿತ ಭವನ ಬಳಿಯ ಮಂಗಳೂರು ರಸ್ತೆಯ ತಡೆಗೋಡೆಯ ಸ್ಲ್ಯಾಬ್‌ಗಳು ಮಳೆಗೆ ಹೊರ ಚಾಚಿದ್ದು, ಈ ಸಂಬಂಧ ಮುನ್ನೆಚ್ಚರಿಕೆಯಾಗಿ ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ. ಪರ್ಯಾಯವಾಗಿ ಮೇಕೇರಿ ಮೂಲಕ ಮಂಗಳೂರು ಕಡೆಗೆ ವಾಹನ ಸಂಚರಿಸಲು ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ತಡೆಗೋಡೆಯ ಸ್ಲ್ಯಾಬ್‌ಗಳು ಮಳೆಗೆ ಹೊರ ಚಾಚಿದ್ದು, ಈ ಬಗ್ಗೆ ಲೋಕೋಪಯೋಗಿ ಇಲಾಖೆ ಕಾರ್ಯದರ್ಶಿಯವರು ಮತ್ತು ಮುಖ್ಯ ಎಂಜಿನಿಯರ್ ಜತೆ ಚರ್ಚಿಸಲಾಗಿದೆ. ಜಿಲ್ಲಾಡಳಿತ ಭವನಕ್ಕೆ ಯಾವುದೇ ರೀತಿ ತೊಂದರೆ ಇಲ್ಲ ಎಂದು ತಿಳಿಸಿದ್ದಾರೆ.