ಮುಖ್ಯಮಂತ್ರಿ ಬದಲಾವಣೆ ಪ್ರಶ್ನೆಯೇ ಇಲ್ಲ: ಡಾ.ಜಿ. ಪರಮೇಶ್ವರ್

18 Dwd 1 (Dr. G.Parameshwar) - Copy
Published on

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಬದಲಾವಣೆ ಪ್ರಶ್ನೆಯೇ ಇಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.

ದಸರಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ನಗರಕ್ಕೆ ಮಂಗಳವಾರ ರಾತ್ರಿ ಆಗಮಿಸಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ಬೆನ್ನಿಗೆ ಹೈಕಮಾಂಡ್ ನಿಂತಿದೆ. ಅದು ಈಗಾಗಲೇ ತನ್ನ ನಿಲುವು ಸಹ ಸ್ಪಷ್ಟಪಡಿಸಿದೆ. ಆದ್ದರಿಂದ ಸದ್ಯಕ್ಕೆ ರಾಜ್ಯದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ. ಹೀಗಾಗಿ, 5 ವರ್ಷ ಕಾಲ ಸಿದ್ದರಾಮಯ್ಯ ಅವರೇ ಸಿಎಂ ಆಗಿ ಮುಂದುವರಿಯುತ್ತಾರೆ ಎಂದು ಹೇಳಿದರು.


ಸಚಿವರು-ಶಾಸಕರೊಂದಿಗೆ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಭೇಟಿ ಕುರಿತು ಪ್ರತಿಕ್ರಿಯಿಸಿದ ಅವರು, ನಾನೂ ಕೆಲವರನ್ನು ಭೇಟಿ ಮಾಡಿ ಮಾತುಕತೆ ನಡೆಸುವೆ. ಡಾ.ಎಚ್.ಸಿ.ಮಹದೇವಪ್ಪ, ಸತೀಶ ಹಾಗೂ ನಾನು ಜತೆಗೆ ಕಾಫಿ ಕುಡಿಯುತ್ತೇವೆ. ಇಷ್ಟಕ್ಕೆ ಬೇರೆ ಅರ್ಥ ಕಲ್ಪಿಸುವ ಅಗತ್ಯ ಇಲ್ಲ ಎಂದರು.

ಹರಿಯಾಣ ಸೋಲಿಗೆ ಮುಡಾ ಹಗರಣ ಕಾರಣ ಎಂಬ ಕಾಂಗ್ರೆಸ್ ಮುಖಂಡ ಕೆ.ಬಿ.ಕೋಳಿವಾಡ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಸೋಲಿಗೆ ಕಾರಣ ಏನು ಎಂದು ಪಕ್ಷದ ಹೈಕಮಾಂಡ್ ಚರ್ಚಿಸಲಿದೆ. ಪ್ರಧಾನಿ ನರೇಂದ್ರ ಮೋದಿ ಪ್ರಚಾರದ ವೇಳೆ ಮುಡಾ ಹಗರಣ ಸಂಬಂಧ ಮಾತನಾಡಿದ್ದಾರೆ. ಅದು ಅಲ್ಲಿ ಕೆಲಸ ಮಾಡಿದೆಯೋ, ಇಲ್ಲವೋ ತಿಳಿದಿಲ್ಲ. ಅದೇ ಸೋಲಿಗೆ ಕಾರಣ ಎಂದು ಹೇಳಲು ಆಗಲ್ಲ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net