ಮಾನವೀಯತೆಗಿಂತ ದೊಡ್ಡ ಧರ್ಮವಿಲ್ಲ

sarani
Published on

ವಿಜಯವಾಣಿ ಸುದ್ದಿಜಾಲ ಹೆಬ್ರಿ

ಮಾನವೀಯತೆಗಿಂತ ದೊಡ್ಡ ಧರ್ಮವಿಲ್ಲ. ಮನುಷ್ಯನಿಗೆ ಹಸಿವು ಕಲಿಸಿದಷ್ಟು ಪಾಠ ಬೇರೆಲ್ಲೂ ಕಲಿಯಲು ಸಿಗುವುದಿಲ್ಲ. ಬದಲಾವಣೆಗೆ ಶಿಕ್ಷಣವೇ ಶ್ರೇಷ್ಠ ಆಯುಧ ಎಂದು ರಾಷ್ಟ್ರೀಯ ಜೇಸಿ ತರಬೇತುದಾರ ರಾಜೇಂದ್ರ ಭಟ್ ಹೇಳಿದರು.

ಕುಚ್ಚೂರು ಹೆರ್ಗ ವಿಠಲಶೆಟ್ಟಿ ಪ್ರೌಢಶಾಲೆಯಲ್ಲಿ ಶಾಂತಿನಿಕೇತನದ ವತಿಯಿಂದ ನಡೆದ ಜ್ಞಾನ ದೀವಿಗೆ ಸರಣಿ ಕಾರ್ಯಕ್ರಮದಲ್ಲಿ ಶೈಕ್ಷಣಿಕ ಉತ್ಕೃಷ್ಟತೆ ಬಗ್ಗೆ ವಿಶೇಷ ಉಪನ್ಯಾಸ ನೀಡಿದರು.

ಹೆಬ್ರಿ ರಾಘವೇಂದ್ರ ಚಾರಿಟೆಬಲ್ ಟ್ರಸ್ಟ್ ಅಧ್ಯಕ್ಷೆ ಡಾ.ಭಾರ್ಗವಿ ಆರ್.ಐತಾಳ್ ಮಾತನಾಡಿದರು. ಎಸ್‌ಡಿಎಂಸಿ ಅಧ್ಯಕ್ಷ ಹರ್ಷ ಶೆಟ್ಟಿ ಬೇಳಂಜೆ ಉದ್ಘಾಟಿಸಿದರು. ಕುಚ್ಚೂರು ಶ್ರೀ ಕೊಡಮಣಿತ್ತಾಯ ಧೂಮಾವತಿ ಗರಡಿ ಟ್ರಸ್ಟ್ ಅಧ್ಯಕ್ಷ ಕಿರಣ್ ತೋಳಾರ್, ಮುಖ್ಯ ಶಿಕ್ಷಕಿ ಪ್ರಭಾವತಿ, ಲಯನ್ಸ್ ಪ್ರಾಂತ್ಯ ಅಧ್ಯಕ್ಷ ಬೇಳಂಜೆ ಹರೀಶ್ ಪೂಜಾರಿ, ಶಾಂತಿನಿಕೇತನ ಸೌಹಾರ್ದ ಸಹಕಾರಿ ಸಂಘ ಅಧ್ಯಕ್ಷ ರಾಜೇಶ್, ಶಾಂತಿನಿಕೇತನ ಅಧ್ಯಕ್ಷ ದೀಕ್ಷಿತ್ ನಾಯಕ್, ಆಡಳಿತ ಮಂಡಳಿ ಸದಸ್ಯರಾದ ಮಹೇಶ್, ನರೇಂದ್ರ, ರಾಜಶ್ರೀ, ನಿತಿನ್, ಶಿಕ್ಷಕರು, ವಿದ್ಯಾರ್ಥಿಗಳಿದ್ದರು. ನರೇಂದ್ರ ಸ್ವಾಗತಿಸಿದರು. ರಾಜೇಶ್ ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net