ಕುಡಿಯುವ ನೀರು, ಮೇವಿಗೆ ಕೊರತೆ ಇಲ್ಲ

28 Dwd 4 DC Divya Prabhu
Published on

ಧಾರವಾಡ: ಜಿಲ್ಲೆಯಲ್ಲಿ ಕುಡಿಯುವ ನೀರಿನ ಕೊರತೆ ಅಥವಾ ಜಾನುವಾರುಗಳಿಗೆ ಮೇವು ಪೂರೈಕೆಯಲ್ಲಿ ವ್ಯತ್ಯಯವಾಗಿಲ್ಲ. ಮುಂದಿನ ದಿನಗಳಲ್ಲಿಯೂ ಅಽಕಾರಿಗಳು ಮುನ್ನೆಚ್ಚರಿಕೆ ವಹಿಸಬೇಕು ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಽಕಾರದ ಅಧ್ಯಕ್ಷೆ ಹಾಗೂ ಜಿಲ್ಲಾಽಕಾರಿ ದಿವ್ಯ ಪ್ರಭು ಹೇಳಿದರು.
ತಮ್ಮ ಕಚೇರಿ ಸಭಾಂಗಣದಲ್ಲಿ ಗುರುವಾರ ಜರುಗಿದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಽಕಾರದ ಸಭೆಯಲ್ಲಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಬೇಡಿಕೆಗೆ ಅನುಗುಣವಾಗಿ ೬ ಕಡೆ ಮೇವು ಬ್ಯಾಂಕ್‌ಗಳನ್ನು ತೆರೆಯಲಾಗಿದೆ. ಅಹತ್ಯವುಳ್ಳ ರೈತರು ರಿಯಾಯಿತಿ ದರದಲ್ಲಿ ಮೇವು ಖರೀದಿಸಬಹುದು. ಸಮಸ್ಯಾತ್ಮಕ ಎಂದು ಗುರುತಿಸಿದ ೧೫೩ ಗ್ರಾಮಗಳಿಗೆ ಅಗತ್ಯವಿದ್ದಾಗ ತಕ್ಷಣ ನೀರು ಪೂರೈಸಲು ಆಯಾ ಗ್ರಾಮ ವ್ಯಾಪ್ತಿಯಲ್ಲಿರುವ ೩೯೦ ಖಾಸಗಿ ಬೋರ್‌ವೆಲ್‌ಗಳನ್ನು ಗುರುತಿಸಲಾಗಿದೆ ಎಂದರು.
ಬರಗಾಲ ಹಿನ್ನೆಲೆಯಲ್ಲಿ ನರೇಗಾ ಯೋಜನೆಯಡಿ `ಒಂದು ಗ್ರಾಮ ಒಂದು ಕೆರೆ' ಯೋಜನೆಯನ್ನು ಅನುಷ್ಠಾನ ಮಾಡಬೇಕು. ಆಯಾ ಗ್ರಾಮದ ನರೇಗಾ ಕೂಲಿ ಕಾರ್ಮಿಕರಿಂದ ಅವರದ್ದೇ ಊರಿನ ಒಂದು ಕೆರೆಯನ್ನು ಸಮಗ್ರ ಅಭಿವೃದ್ಧಿ ಮಾಡಬೇಕು. ಕೆರೆ ರಕ್ಷಣೆಗೆ ಆದ್ಯತೆ ನೀಡಬೇಕು. ಕೆರೆಗಳ ಒತ್ತುವರಿ ಆಗಿದ್ದರೆ ತಕ್ಷಣ ತೆರವುಗೊಳಿಸಿ ಹದ್ದಬಸ್ತು ಮಾಡಿಸಬೇಕು ಎಂದರು.
ಅಪರ ಜಿಲ್ಲಾಽಕಾರಿ ಗೀತಾ ಸಿ.ಡಿ., ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ವಿಜಯಕುಮಾರ ಆಜೂರ, ಮಹಾನಗರ ಪಾಲಿಕೆ ಅಽÃಕ್ಷಕ ಇಂಜಿನಿಯರ್ ತಿಮ್ಮಪ್ಪ, ಪಶುಪಾಲನೆ ಮತ್ತು ಪಶು ವೈದ್ಯಕೀಯ, ಕೃಷಿ ಇಲಾಖೆ ಅಽಕಾರಿಗಳು, ತಹಸೀಲ್ದಾರರು, ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net