ಜಾನುವಾರುಗಳಿಗೆ ಮೇವಿನ ಕೊರತೆಯಿಲ್ಲ

ಕಂಪ್ಲಿ ತಹಸಿಲ್ ಕಚೇರಿ ಸಭಾಂಗಣದಲ್ಲಿ ಪ್ರಗತಿ ಪರಿಶೀಲನೆ ಸಭೆ ನಡೆಯಿತು. ತಹಸೀಲ್ದಾರ್ ಎಸ್.ಶಿವರಾಜ, ಪುರಸಭೆ ಪರಿಸರ ಅಭಿಯಂತರ ಶರಣಪ್ಪ, ಅಧಿಕಾರಿಗಳಾದ ಆರ್.ಕೆ.ಶ್ರೀಕುಮಾರ್, ಡಾ.ಕೆ.ಯು.ಬಸವರಾಜ, ರವಿ ರಾಥೋಡ್ ಇತರರಿದ್ದರು.
ಕಂಪ್ಲಿ ತಹಸಿಲ್ ಕಚೇರಿ ಸಭಾಂಗಣದಲ್ಲಿ ಪ್ರಗತಿ ಪರಿಶೀಲನೆ ಸಭೆ ನಡೆಯಿತು. ತಹಸೀಲ್ದಾರ್ ಎಸ್.ಶಿವರಾಜ, ಪುರಸಭೆ ಪರಿಸರ ಅಭಿಯಂತರ ಶರಣಪ್ಪ, ಅಧಿಕಾರಿಗಳಾದ ಆರ್.ಕೆ.ಶ್ರೀಕುಮಾರ್, ಡಾ.ಕೆ.ಯು.ಬಸವರಾಜ, ರವಿ ರಾಥೋಡ್ ಇತರರಿದ್ದರು.
Published on

ಕಂಪ್ಲಿ: ದೇವಲಾಪುರ ಗ್ರಾಮದಲ್ಲಿ ನೀರಿನ ಕೊರತೆಯಾಗುವ ಸಾಧ್ಯತೆಯಿದ್ದು, ಖಾಸಗಿ ಬೋರ್‌ವೆಲ್ ಮೂಲಕ ನೀರು ಪೂರೈಸಲಾಗುವುದು. ಜಾನುವಾರುಗಳಿಗೆ ಮೇವಿನ ಕೊರತೆಯಿಲ್ಲ ಎಂದು ತಹಸೀಲ್ದಾರ್ ಎಸ್.ಶಿವರಾಜ ಹೇಳಿದರು.

ನಗರದ ತಹಸಿಲ್ ಕಚೇರಿ ಸಭಾಂಗಣದಲ್ಲಿ ಗುರುವಾರ ಕಂಪ್ಲಿ ತಾಲೂಕು ಉಸ್ತುವಾರಿ ಅಧಿಕಾರಿ ಹಾಗೂ ಶಿರಸಿ ಉಪ ವಿಭಾಗಾಧಿಕಾರಿ ಕೆ.ವಿ.ಕಾವ್ಯಾರಾಣಿ ನೇತೃತ್ವದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆದ ಸಮಾಲೋಚನೆ ಸಭೆಯಲ್ಲಿ ಮಾತನಾಡಿದರು. ಪುರಸಭೆ ಪರಿಸರ ಅಭಿಯಂತರ ಶರಣಪ್ಪ ಮಾತನಾಡಿ, ಪಟ್ಟಣದ 23ವಾರ್ಡ್‌ಗಳಿಗೆ ತುಂಗಭದ್ರಾ ನದಿಯಿಂದ ಎರಡು ದಿನಕ್ಕೆ ಒಂದು ಬಾರಿ ಕುಡಿಯುವ ನೀರು ಪೂರೈಸಲಾಗುತ್ತಿದೆ. ಬೇಸಿಗೆಯಲ್ಲಿ ಕುಡಿವ ನೀರಿನ ಸಮಸ್ಯೆ ಆಗುವುದಿಲ್ಲ. ನಗರದ 117ಬೋರ್‌ವೆಲ್‌ಗಳ ಪೈಕಿ 107ಬೋರ್‌ವೆಲ್‌ಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿದ್ದು, ಉಳಿದ ಬೋರ್‌ವೆಲ್‌ಗಳ ದುರಸ್ತಿಗೆ ಕ್ರಮಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net