

ರಾಯಚೂರು ಜಿಲ್ಲಾಧಿಕಾರಿಗಳ ಪಿಡಿ ಅಕೌಂಟಿನಲ್ಲಿ 26 ಕೋಟಿ ರೂ ಹಣ ಇದೆ. ಪರಿಹಾರ ಕಾರ್ಯಕ್ಕೆ ಯಾವುದೇ ರೀತಿಯ ಹಣಕಾಸಿನ ಕೊರತೆಯಿಲ್ಲ. ರೈತರಿಗೆ ಸರ್ಕಾರ ಸ್ಪಂದಿಸುತ್ತಿದೆಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ ಹೇಳಿದರು.
ನಗರದ ಜಿಲ್ಲಾಧಿಕಾರಿಗಳ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮುಂಗಾರು ಹಂಗಾಮಿನ ಅವಧಿಯಲ್ಲಿ ಜೀವಹಾನಿಯ 7 ಪ್ರಕರಣಗಳಿಗೆ ತಲಾ 5 ಲಕ್ಷ ರೂ ದಂತೆ ಒಟ್ಟು 35 ಲಕ್ಷ ರೂ ಪರಿಹಾರವನ್ನು ಈಗಾಗಲೇ ನೀಡಲಾಗಿದೆ. 11 ಸಣ್ಣ ಮತ್ತು 4 ದೊಡ್ಡ ಜಾನುವಾರು ಜೀವಹಾನಿ ಪ್ರಕರಣಗಳಿಗೆ ಪರಿಹಾರ ಒದಗಿಸಲಾಗಿದೆ. ಜೀವಹಾನಿ, ಮನೆ ಹಾನಿ ಪ್ರಕರಣಗಳಿಗೆ ಕಾಲಮಿತಿಯೊಳಗೆ ಪರಿಹಾರ ಒದಗಿಸಲು ಸೂಚಿಸಲಾಗಿದೆ ಎಂದರು.
ಈ ಸಂದರ್ಭದಲ್ಲಿ ಎನ್.ಎಸ್.ಬೋಸರಾಜು, ಶಾಸಕರಾದ ಬಸನಗೌಡ ದದ್ದಲ್, ಆರ ಬಸವನಗೌಡ ತುರವಿಹಾಳ, ಹಂಪಯ್ಯ ನಾಯಕ ಇದ್ದರು.