ಕೆಲಸ ಮಾಡದ ಅಧಿಕಾರಿಗಳಿಗಿಲ್ಲ ಉಳಿಗಾಲ

mla
ಮಾಲೂರಿನ ಮಾಸ್ತಿ ವೆಂಕಟೇಶ್​ ಅಯ್ಯಂಗಾರ್​ ರಂಗಮಂದಿರದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಹಮ್ಮಿಕೊಂಡಿದ್ದ ಪೊಷಣ್​ ಅಭಿಯಾನದಡಿ ಅಂಗನವಾಡಿ ಕಾರ್ಯಕರ್ತೆರಿಗೆ ಶಾಸಕ ಕೆ.ವೈ ನಂಜೇಗೌಡ ಮೊಬೈಲ್​ ವಿತರಿಸಿದರು. ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಮುನೇಗೌಡ, ತಾಲೂಕು ಆರೋಗ್ಯ ಅಧಿಕಾರಿ ರಮೇಶ್​ಬಾಬು, ಪುರಸಭಾ ಸದಸ್ಯರಾದ ಇಮ್ತಿಯಾಜ್​ಖಾನ್​, ಮುರಳಿಧರ್​, ಶಿಶು ಅಭಿವೃದ್ಧಿ ಅಧಿಕಾರಿ ಬೈರಾರೆಡ್ಡಿ, ಜಿಲ್ಲಾ ಶಿಶು ಅಭಿವೃದ್ಧಿ ಅಧಿಕಾರಿ ವಂಶಿಕೃಷ್ಣ ಇದ್ದರು.
Published on

ಮಾಲೂರು: ತಾಲೂಕಿನ ಆಡಳಿತದಲ್ಲಿ ಯಾವ ಅಧಿಕಾರಿ ಸಮರ್ಪಕ ಕೆಲಸ ಮಾಡುವುದಿಲ್ಲವೋ ಅವರಿಗೆ ಉಳಿಗಾಲವಿಲ್ಲ ಎಂದು ಶಾಸಕ ಕೆ.ವೈ.ನಂಜೇಗೌಡ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.


ಪಟ್ಟಣದ ಮಾಸ್ತಿ ವೆಂಕಟೇಶ್​ ಅಯ್ಯಂಗಾರ್​ ರಂಗಮಂದಿರದಲ್ಲಿ ಮಹಿಳಾ ಹಾಗೂ ಮಕ್ಕಳ ಅಭಿವೃದ್ಧಿ ಇಲಾಖೆ, ಕೋಲಾರ ಶಿಶು ಅಭಿವೃದ್ಧಿ ಯೋಜನೆ ಆಶ್ರಯದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಪೋಷಣ್​ ಅಭಿಯಾನ ಯೋಜನೆಯಡಿ ಅಂಗನವಾಡಿ ಕಾರ್ಯಕರ್ತರಿಗೆ ಸ್ಮಾರ್ಟ್​ಫೋನ್​, ತೂಕದ ಸಾಧನ ಮತ್ತು ಔಷಧ ಕಿಟ್​ ಹಾಗೂ ಭಾಗ್ಯಲಕ್ಷಿ$್ಮ, -ಸುಕನ್ಯಾ ಸಮೃದ್ಧಿ ಯೋಜನೆಯಡಿ ಫಲಾನುಭವಿಗಳಿಗೆ ಪಾಸ್​ಬುಕ್​ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದರು.


ತಾಲೂಕಿನಲ್ಲಿ ಯಾವ ಅಧಿಕಾರಿ ಕೆಲಸ ಮಾಡಲು ಆಗುವುದಿಲ್ಲವೋ ಬೇರೆ ಕಡೆ ಹೋಗಬಹುದು. ಭ್ರಷ್ಟ ಅಧಿಕಾರಿಗಳನ್ನು ತಾಲೂಕಿನಲ್ಲಿ ಇಟ್ಟುಕೊಳ್ಳುವುದಿಲ್ಲ. ಜನತೆ ನನ್ನ ಮೇಲೆ ಇಟ್ಟಿರುವ ನಂಬಿಕೆ ಉಳಿಸಿಕೊಳ್ಳಬೇಕಾದರೆ ಕ್ಷೇತ್ರದಲ್ಲಿರುವ ಅಧಿಕಾರಿಗಳು ಪ್ರಾಮಾಣಿಕ ಕೆಲಸ ಮಾಡಬೇಕು. ಸರ್ಕಾರ ಫಲಾನುಭವಿಗಳಿಗೆ ನೀಡುವ ಯೋಜನೆಗಳನ್ನು ಅಧಿಕಾರಿಗಳು ಅನುಷ್ಠಾನಗೊಳಿಸುವುದು ಅಧಿಕಾರಿಗಳ ಕರ್ತವ್ಯ.
ಅಂಗನವಾಡಿ ಕಾರ್ಯಕರ್ತೆಯರು ಪ್ರಾಮಾಣಿಕವಾಗಿ ಕೆಲಸ ಮಾಡಬೇಕು. ಆದರಿಂದ ಸರ್ಕಾರ ಮೊಬೈಲ್​ ಫೋನ್​ ನೀಡಲಾಗುತ್ತಿದೆ. ಅಂಗನವಾಡಿ ಕೇಂದ್ರಗಳಲ್ಲಿ ನಡೆಯುತ್ತಿರುವ ಕೆಲಸಗಳ ಬಗ್ಗೆ ಪಾರದರ್ಶಕತೆ ಪಡೆಯಲು ಅನುಕೂಲವಾಗಲು ಸರ್ಕಾರ ಮೊಬೈಲ್​ ನೀಡಿದೆ. ತಾಲೂಕಿನಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಅಭಿವೃದ್ಧಿ ಕೆಲಸಗಳಿಗೆ ಸ್ಪಂದಿಸುತ್ತಿದ್ದಾರೆ. ಸರ್ಕಾರ ನೀಡಿರುವ 5 ಗ್ಯಾರಂಟಿಗಳನ್ನು ಮಾಲೂರು ತಾಲೂಕಿನಲ್ಲಿ ಸಾರ್ವಜನಿಕರಿಗೆ ತಲುಪಿಸಲು ಸಹಕಾರ ನೀಡಿದ್ದಾರೆ. ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ ಸ್ವಂತ ಕಟ್ಟಡ ಇಲ್ಲದಿರುವ ಕಡೆ ಕಟ್ಟಡಗಳನ್ನು ನಿಮಾರ್ಣ ಮಾಡಿಕೊಡಲಾಗುವುದು. ಬಡವರ ಮಕ್ಕಳು, ಬಡ ಹೆಣ್ಣು ಮಕ್ಕಳ ಗರ್ಭಿಣಿಯರಿಗೆ ಸರ್ಕಾರದಿಂದ ಸಿಗುವ ಪೌಷ್ಟಿಕಾಂಶಗಳನ್ನು ಅಂಗನವಾಡಿ ಕೇಂದ್ರಗಳು ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಬೇಕು ಎಂದರು.


ತಾ.ಪಂ.ಇಒ ಕೃಷ್ಣಪ್ಪ ಮಾತನಾಡಿ, ತಾಲೂಕಿನಲ್ಲಿ ಅಂಗನವಾಡಿ ಕೇಂದ್ರಗಳ ಕಾರ್ಯ ವೈಖರಿ ಪಾರದರ್ಶಕತೆಯಿಂದ ತಿಳಿದುಕೊಳ್ಳಲು ಕಾಗದಪತ್ರದ ವ್ಯವಹಾರದ ಮೂಲಕ ನಿಧಾನವಾಗುತ್ತದೆ. ಆದ್ದರಿಂದ ಅಂಗನವಾಡಿ ಕಾರ್ಯಕರ್ತರಿಗೆ ಸರ್ಕಾರ ಮೊಬೈಲ್​ ನೀಡಿದೆ. ಆಡಳಿತದಲ್ಲಿ ಪಾರದರ್ಶಕತೆ ಮತ್ತು ಮಕ್ಕಳ ಆಹಾರದಲ್ಲಿ ಗುಣಮಟ್ಟ ಕಾಪಾಡಲು ಮುಂದಿನ ದಿನಗಳಲ್ಲಿ ಆನ್​ಲೈನ್​ ಅಳವಡಿಸಲು ಸರ್ಕಾರ ಈ ವ್ಯವಸ್ಥೆ ಮಾಡಿದೆ.ಕಾರ್ಯಕರ್ತೆಯರು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದರು.
ತಾಲೂಕು ಕೃಷಿಕ ಸಮಾಜದ ಅಧ್ಯಕ್ಷ ಹನುಮಂತಪ್ಪ, ಮುಖಂಡರಾದ ಎ.ಹನುಮಂತರೆಡ್ಡಿ, ನವೀನ್​, ತನ್ವೀರ್​ ಅಹ್ಮದ್​, ಶ್ರೀನಿವಾಸ್​ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net