ಕೃಷಿ ಕೂಲಿ ಕಾರ್ಮಿಕರಿಗಿಲ್ಲ ಕೆಲಸ

sgn bara
Published on

ಶಿಗ್ಗಾಂವಿ: ತಾಲೂಕಿನಲ್ಲಿ ಒಟ್ಟು 40,688 ಹೆಕ್ಟೇರ್ ಕೃಷಿ ಭೂಮಿ ಬಿತ್ತನೆಯಾಗಿದೆ.

ಮೆಕ್ಕೆಜೋಳ 19,300, ಸೋಯಾಬೀನ್ 5,700, ಭತ್ತ 5,800, ಶೇಂಗಾ 2,500, ಹತ್ತಿ 3000 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯಾಗಿದೆ. ಸದ್ಯದ ಪರಿಸ್ಥಿತಿಯಲ್ಲಿ ತಗ್ಗು ಪ್ರದೇಶ, ಕೊಳವೆಬಾವಿ, ಹಳ್ಳ ಕೊಳ್ಳಗಳ ಸಂಪರ್ಕವಿರುವ ರೈತರು ಸುಮಾರು 25-30 ಪ್ರತಿಶತ ಬೆಳೆ ಉಳಿಸಿಕೊಂಡಿದ್ದಾರೆ. ತಾಲೂಕಿನಾದ್ಯಂತ ಬಹುತೇಕ 90 ಪ್ರತಿಶತ ಬೆಳೆಗಳು ಮಳೆ ಇಲ್ಲದೆ ಒಣಗುತ್ತಿವೆ.

ತಾಲೂಕಿನ ಬೆಳೆಗಳನ್ನು ಉಳಿಸಿಕೊಳ್ಳಲು ರೈತರು ಟ್ಯಾಂಕರ್‌ಗಳ ಮೂಲಕ ನೀರುಣಿಸುತ್ತಿದ್ದಾರೆ. ಮಳೆರಾಯ ಮುನಿಸಿಕೊಂಡಿದ್ದರಿಂದ ಗ್ರಾಮೀಣ ಪ್ರದೇಶಗಳಲ್ಲಿ ಕೃಷಿ ಕೂಲಿ ಕಾರ್ಮಿಕರಿಗೆ ಕೆಲಸವಿಲ್ಲದಂತಾಗಿದೆ. ಕೆಲವರು ನರೇಗಾ ಯೋಜನೆಯಡಿ ಕೆಲಸಕ್ಕೆ ಹೋಗುತ್ತಿದ್ದಾರೆ. ಕಂದಾಯ, ಕೃಷಿ ಇಲಾಖೆ, ತಾಪಂ ಅಧಿಕಾರಿಗಳು ಈಗಾಗಲೇ ಸಭೆ ನಡೆಸಿ ಬರ ಎದುರಿಸುವ ಕುರಿತು ಚರ್ಚಿಸಲಾಗಿದೆ.

ಮುಂದಿನ ದಿನಗಳಲ್ಲಿ ನೀರಿನ ಸಮಸ್ಯೆ ಉದ್ಭವಿಸಿದರೆ ಟ್ಯಾಂಕರ್ ಮೂಲಕ ಸರಬರಾಜು ಮಾಡಲು ಅಗತ್ಯ ಸಿದ್ಧತೆ ಕೈಗೊಳ್ಳುತ್ತಿದ್ದೇವೆ. ತಾಲೂಕನ್ನು ಬರಪೀಡಿತ ಎಂದು ಸರ್ಕಾರ ಘೋಷಿಸಿಲ್ಲ. ಹೀಗಾಗಿ, ತಾಲೂಕು ಆಡಳಿತ ಮತ್ತು ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ.I ಸಂತೋಷ ಹಿರೇಮಠ, ತಹಸೀಲ್ದಾರ್

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net