ಹಳ್ಳಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಿರಲಿ

SGN meeting
Published on

ಶಿಗ್ಗಾಂವಿ: ಬಿಸಿಲಿನ ಧಗೆಯಿಂದಾಗಿ ತಾಪಮಾನದಲ್ಲಿ ಭಾರಿ ಏರಿಕೆಯಾಗುತ್ತಿದೆ. ಇದರಿಂದ ತಾಲೂಕಿನ ಹಳ್ಳಿಗಳಲ್ಲಿ ನೀರಿನ ಸಮಸ್ಯೆ ಆಗದಂತೆ ಗ್ರಾಮ ಪಂಚಾಯಿತಿ ಅಧಿಕಾರಿಗಳು ಅಗತ್ಯ ಮುಂಜಾಗ್ರತೆ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಯಾಸೀರಖಾನ್ ಪಠಾಣ ಸೂಚಿಸಿದರು.

ಪಟ್ಟಣದ ತಾಪಂ ಸಭಾ ಭವನದಲ್ಲಿ ಸೋಮವಾರ ತಾಲೂಕಿನ ಪಿಡಿಒಗಳ ತುರ್ತು ಸಭೆ ನಡೆಸಿ ಮಾತನಾಡಿದ ಅವರು, ಬೇಸಿಗೆ ಆರಂಭವಾಗಿರುವ ಹಿನ್ನೆಲೆಯಲ್ಲಿ ಜನರು ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುಂಚಿತವಾಗಿಯೇ ಎಚ್ಚೆತ್ತುಕೊಳ್ಳಬೇಕಿದೆ. ತೀವ್ರ ಸಮಸ್ಯೆಗಳಿದ್ದಲ್ಲಿ ತಾಲೂಕಾಡಳಿತಕ್ಕೆ ಮಾಹಿತಿ ನೀಡಬೇಕು ಎಂದರು.

ಜನರ ಸಮಸ್ಯೆಗಳಿಗೆ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಸದಾ ಸ್ಪಂದಿಸಬೇಕು. ಕುಡಿಯುವ ನೀರಿನ ಜತೆಗೆ ಅಗತ್ಯಕ್ಕೆ ಅನುಸಾರವಾಗಿ ಸೌಲಭ್ಯ ಒದಗಿಸಬೇಕು ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.

ಜೆಜೆಎಂ ವಿಸ್ತರಣೆ:

ಜೆಜೆಎಂ ಯೋಜನೆಯನ್ನು 2028ರವರೆಗೆ ವಿಸ್ತರಿಸಲಾಗಿದೆ. ಎಲ್ಲೆಲ್ಲಿ ಗ್ರಾಮ ಹಾಗೂ ಪಟ್ಟಣ ಭಾಗ ಬೆಳವಣಿಗೆಯಾಗಿದೆ ಎಂಬುದನ್ನು ಪರಿಶೀಲಿಸಿ, ಯೋಜನೆಯನ್ನೂ ವಿಸ್ತರಿಸಿ ಅನುಕೂಲ ಮಾಡಿಕೊಡಬೇಕು ಎಂದರು.

ಶಿಗ್ಗಾಂವಿ ತಹಸೀಲ್ದಾರ್ ರವಿ ಕೊರವರ, ತಾಪಂ ಇಒ ಕುಮಾರ ಮಣ್ಣವಡ್ಡರ, ಸವಣೂರ ತಹಸೀಲ್ದಾರ್ ಭರತರಾಜ್, ತಾಪಂ ಇಒ ನವೀನ ಕಟ್ಟಿಮನಿ, ಸಿಡಿಪಿಒ ಗಣೇಶ ಲಿಂಗನಗೌಡ್ರ, ಜಿಪಂ ಎಇಇ ಸಂಗನಬಸವ ಜಿನಗಾ, ಗುಡ್ಡಪ್ಪ ಜಲದಿ, ಎಸ್.ಎ್. ಮಣಕಟ್ಟಿ, ಸುಭಾಸ ಮಜ್ಜಗಿ, ಅಧಿಕಾರಿಗಳು ಹಾಗೂ ಶಿಗ್ಗಾಂವಿ-ಸವಣೂರ ತಾಲೂಕಿನ ಗ್ರಾಪಂ ಪಿಡಿಒಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net