ಅಭಿವೃದ್ಧಿ ಕಾಮಗಾರಿಗಳಲ್ಲಿ ಗುಣಮಟ್ಟ ಇರಲಿ

mysore
Published on

ಮೈಸೂರು: ಅಭಿವೃದ್ಧಿ ಕಾಮಗಾರಿಗಳಲ್ಲಿ ಗುಣಮಟ್ಟ ಕಾಯ್ದುಕೊಳ್ಳಬೇಕು ಎಂದು ಶಾಸಕ ಜಿ.ಟಿ.ದೇವೇಗೌಡ ಅಧಿಕಾರಿಗಳಿಗೆ ಸೂಚಿಸಿದರು.


ಶ್ರೀರಾಂಪುರ, ಲಿಂಗಾಂಬುದಿ ಪಾಳ್ಯ, ಚಾಮುಂಡಿಬೆಟ್ಟದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸೋಮವಾರ ಚಾಲನೆ ನೀಡಿ ಮಾತನಾಡಿದರು.
ಚಾಮುಂಡಿಬೆಟ್ಟದ ಪೌರಕಾರ್ಮಿಕರ ಕಾಲನಿಗೆ ರಸ್ತೆ, ಚರಂಡಿ ಮತ್ತು ಒಳಚರಂಡಿ ವ್ಯವಸ್ಥೆ ಕಲ್ಪಿಸಲಾಗಿದೆ.

ಆದರೆ ಸಂಪರ್ಕ ರಸ್ತೆ ಮತ್ತು ಸ್ಮಶಾನಕ್ಕೆ ಹೋಗುವ ರಸ್ತೆ ಅಭಿವೃದ್ಧಿಪಡಿಸುವಂತೆ ಕೋರಿದ್ದರು. 50 ಲಕ್ಷ ರೂ. ವೆಚ್ಚದಲ್ಲಿ ಈ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಮಾಹಿತಿ ನೀಡಿದರು.


ಪಕ್ಕದಲ್ಲಿರುವ ಕೆರೆಯನ್ನು ಜೆ.ಕೆ.ಟಯರ್ ಕಂಪನಿಯ ನೀಡಿರುವ ಸಿಎಸ್‌ಆರ್ ಅನುದಾನದಲ್ಲಿ ಅಭಿವೃದ್ಧಿಪಡಿಸಲಾಗುತ್ತಿದ್ದು, ಶೀಘ್ರದಲ್ಲಿ ಉದ್ಘಾಟನೆ ಮಾಡಲಾಗುವುದು ಎಂದರು.


ನಂತರ ಶ್ರೀರಾಂಪುರದಲ್ಲಿ 100 ಲಕ್ಷ ರೂ. ವೆಚ್ಚದಲ್ಲಿ ಸಿ.ಸಿ. ರಸ್ತೆ ಮತ್ತು ಚರಂಡಿ ನಿರ್ಮಾಣಕ್ಕೆ ಚಾಲನೆ ನೀಡಿದರು. ಪಟ್ಟಣ ಪಂಚಾಯಿತಿ ವತಿಯಿಂದ ಸ್ವಚ್ಛತೆ ಕಾಪಾಡುವಂತೆ ಸೂಚಿಸಿದರು.


ನಂತರ ಲಿಂಗಾಂಬುದಿ ಪಾಳ್ಯದಲ್ಲಿ 50 ಲಕ್ಷ ರೂ. ವೆಚ್ಚದಲ್ಲಿ ಸಿ.ಸಿ. ರಸ್ತೆ ಮತ್ತು ಚರಂಡಿ ನಿರ್ಮಾಣಕ್ಕೆ ಚಾಲನೆ ನೀಡಿದರು. ಪರಸಯ್ಯನಹುಂಡಿ ಸುರೇಶ್, ತಾ.ಪಂ. ಮಾಜಿ ಸದಸ್ಯರಾದ ಯೋಗಾಶ್ರೀನಿವಾಸ್, ಹನುಮಂತು, ಗ್ರಾ.ಪಂ. ಮಾಜಿ ಸದಸ್ಯರಾದ ಕುಮಾರ್, ಗುರೂರು ಶಂಕರ್, ಮಹೇಶ್, ನಿರ್ಮಿತ ಕೇಂದ್ರದ ಶ್ವೇತಾ, ಪಟ್ಟಣ ಪಂಚಾಯಿತಿ ಅಧಿಕಾರಿ ರೂಪೇಶ್, ಶ್ರೀರಾಂಪುರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಸುರೇಶ್, ಶ್ರೀರಾಂಪುರ ಗ್ರಾಮಸ್ಥರು, ಲಿಂಗಾಂಬುದಿ ಪಾಳ್ಯದ ಗ್ರಾಮಸ್ಥರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net