ಜಾತಿ ಗಣತಿ ವರದಿ ಜಾರಿಯಲ್ಲಿ ಅನ್ಯಾಯವಾಗಲ್ಲ, ಸಿಎಂ ಸರ್ವಾನುಮತ ನಿರ್ಧಾರ ತೆಗೆದುಕೊಳ್ಳುವ ವಿಶ್ವಾಸ

BPL-18-EX-MLA-NEWS-PHOTO.jpg
Published on


ಚಿಕ್ಕಬಳ್ಳಾಪುರ: ಜಾತಿ ಜನಗಣತಿ ವರದಿಯಿಂದ ಯಾವುದೇ ಜನಾಂಗಕ್ಕೆ ಅನ್ಯಾಯ ಆಗದಂತೆ ರಾಜ್ಯ ಮುಖ್ಯಮಂತ್ರಿಗಳು ಸಚಿವ ಸಂಪುಟದಲ್ಲಿ ಚರ್ಚೆ ನಡೆಸಿ ಅಂತಿಮ ತಿರ್ಮಾನ ತೆಗೆದುಕೊಳ್ಳಲಿದ್ದಾರೆ. ಒಳಮೀಸಲಾತಿ ಮತ್ತು ಜಾತಿ ಜನಗಣತಿಯಿಂದ ಯಾರಿಗೂ ಮೋಸ ಆಗುವುದಿಲ್ಲ ಎಂದು ಕೆಪಿಸಿಸಿ ಉಪಾಧ್ಯಕ್ಷ ಹಾಗೂ ಮಾಜಿ ಶಾಸಕ ಎನ್.ಸಂಪಂಗಿ ವಿಶ್ವಾಸ ವ್ಯಕ್ತಪಡಿಸಿದರು.
ಬಾಗೇಪಲ್ಲಿ ತಾಲೂಕಿನ ಯಲ್ಲಂಪಲ್ಲಿ ಗ್ರಾಮದಲ್ಲಿ ನಡೆದ ಶ್ರೀ ಲಕ್ಷ್ಮೀ ವೆಂಕಟರಮಣಸ್ವಾಮಿ ಬ್ರಹ್ಮ ರಥೋತ್ಸವದಲ್ಲಿ ಭಾಗವಹಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಜಾತಿ ಜನಗಣತಿ ಹಾಗೂ ಒಳ ಮೀಸಲಾತಿ ವಿಚಾರದಲ್ಲಿ ರಾಜ್ಯಾದ್ಯಂತ ಪರ, ವಿರೋಧದ ಚರ್ಚೆಗಳು ನಡೆಯುತ್ತಿರುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಗಮನಕ್ಕೆ ಬಂದಿದೆ. ವ್ಯಾಪಕವಾಗಿ ಜಾತಿ ಜನಗಣತಿ ಕುರಿತು ಸುಧೀರ್ಘ ಚರ್ಚೆಗಳು ನಡೆಯುತ್ತಿವೆ. ಇದರ ನಡುವೆ ಜಾತಿ ಜನಗಣತಿ ವರದಿಯಲ್ಲಿ ಲೋಪ ಇದೆ ಎಂದು ಕೆಲ ಸಚಿವರು, ಶಾಸಕರು ಸಚಿವ ಸಂಪುಟದ ಸಭೆಯಲ್ಲಿ ವೈಯಕ್ತಿಕ ಅಭಿಪ್ರಾಯಗಳನ್ನು ತಿಳಿಸಿದ್ದಾರೆ. ಈ ಎಲ್ಲಾ ಅಂಶಗಳನ್ನು ಪರಿಶೀಲಿಸಿ ಯಾವ ಜನಾಂಗಕ್ಕೂ ಅನ್ಯಾಯ ಆಗದಂತೆ ರಾಜ್ಯ ಮುಖ್ಯಮಂತ್ರಿಗಳು ತೀರ್ಮಾನ ತೆಗೆದುಕೊಳ್ಳಲಿದ್ದಾರೆಂಬ ವಿಶ್ವಾಸ ನನಗಿದೆ ಎಂದರು.
ಈ ಸಂದರ್ಭದಲ್ಲಿ ಗ್ರಾ.ಪಂ. ಅಧ್ಯಕ್ಷೆ ಸರಸ್ವತಮ್ಮ ಅಶ್ವತ್ಥಪ್ಪ,  ಮುಖಂಡರಾದ ಮೂಚಿಚಿನ್ನೆಪಲ್ಲಿ ರಾಮಚಂದ್ರಪ್ಪ, ಗಂಗಿರೆಡ್ಡಿ, ಕಿಟ್ಟಪ್ಪ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net