

ಮೈಸೂರು: ರೋಟರಿ ಕ್ಲಬ್ ಆಫ್ ಹೆರಿಟೇಜ್ ಮೈಸೂರು ವತಿಯಿಂದ ಶ್ರಾವಣ ಮಾಸದ ಅಂಗವಾಗಿ ಅವರೆ ಕಾಳು ಸಾರು, ರಾಗಿ ಮುದ್ದೆ ಊಟ ಆಯೋಜಿಸಲಾಗಿದೆ ಎಂದು ಕ್ಲಬ್ ಅಧ್ಯಕ್ಷ ಆರ್.ರಾಜೇಶ್ ತಿಳಿಸಿದರು.
ಪುಣ್ಯಕೋಟಿ ಸೇವಾ ಟ್ರಸ್ಟ್ ಆಶ್ರಯದಲ್ಲಿ ಆ.10ರಂದು ಬೆಳಗ್ಗೆ 11ಕ್ಕೆ ವಿಜಯನಗರದ ಎರಡನೇ ಹಂತದಲ್ಲಿ ಇರುವ ಯೋಗಾ ನರಸಿಂಹಸ್ವಾಮಿ ದೇವಸ್ಥಾನದ ಪಕ್ಕದಲ್ಲಿ ಸುಮಾರು 10 ರಿಂದ 12 ಸಾವಿರ ಭಕ್ತರಿಗೆ ಊಟದ ವ್ಯವಸ್ಥೆ ಮಾಡಲಾಗಿದೆ. ಈ ಕಾರ್ಯಕ್ರಮವನ್ನು ಭಾಷ್ಯಂ ಸ್ವಾಮೀಜಿ ಚಾಲನೆ ನೀಡುವರು. ಆದಿಚುಂಚನಗಿರಿ ಮಠದ ಡಾ.ನಿರ್ಮಲಾನಂದನಾಥ ಸ್ವಾಮೀಜಿ, ಶಾಸಕ ಜಿ.ಟಿ.ದೇವೇಗೌಡ ಹಾಗೂ ಇನ್ನಿತರರು ಹಾಜರಿರುವರು ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಅವರು ತಿಳಿಸಿದರು.