

ಕಾರವಾರ:ಲಿಂಗತ್ವ ಅಲ್ಪಸಂಖ್ಯಾತರಿಗೆ ಗೃಹ ಲಕ್ಷ್ಮೀ ಸೌಲಭ್ಯ ಒದಗಿಸಲು ಸರ್ಕಾರ ತನ್ನ ತಂತ್ರಾಂಶದಲ್ಲಿ ಅನುಮೋದನೆ ನೀಡಿದೆ. ನ್ಯಾಷನಲ್ ಪೋರ್ಟಲ್ ಫಾರ್ ಟ್ರಾನ್ಸ್ಜೆಂಡರ್ ಮೂಲಕ ಪಡೆದಿರುವ ಲಿಂಗತ್ವ ಅಲ್ಪಸಂಖ್ಯಾತರ ಗುರುತಿನ ಚೀಟಿಯನ್ನು ಪರಿಗಣಿಸಲು ಸರ್ಕಾರವು ಅನುಮೋದನೆ ನೀಡಿ ಗೃಹ ಲಕ್ಷ್ಮೀ ತಂತ್ರಾಂಶದಲ್ಲಿ ಮಾರ್ಪಾಡು ಮಾಡಲಾಗಿದೆ.
ಜಿಲ್ಲೆಯ ಐವರು ಲಿಂಗತ್ವ ಅಲ್ಪಸಂಖ್ಯಾತರು ಶುಕ್ರವಾರ ಕಾರವಾರಕ್ಕೆ ಆಗಮಿಸಿ ಗೃಹ ಲಕ್ಷ್ಮೀ ಯೋಜನೆಯ ಸೌಲಭ್ಯ ಒದಗಿಸುವಂತೆ ಮನವಿ ಸಲ್ಲಿಸಿದರು. ಉಳಿದ ಲಿಂಗತ್ವ ಅಲ್ಪ ಸಂಖ್ಯಾತರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಚೇರಿಗೆ ತೆರಳಿ ಗೃಹಲಕ್ಷ್ಮಿ ಯೋಜನೆಯ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ತಮ್ಮ ಟ್ರಾನ್ಸ್ ಜೆಂಡರ್ ಗುರುತಿನಚೀಟಿ, ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ ಮತ್ತು ಆಧಾರ ಕಾರ್ಡ್ಪ್ರತಿಯನ್ನು ಕಡ್ಡಾಯವಾಗಿ ನೀಡಬೇಕಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.