ಚಿನ್ನಾಭರಣ ದೋಚಿದ್ದ ಆರೋಪಿ ಬಂಧನ

Arrest Logo Web 600x400
Published on

ಬೆಂಗಳೂರು: ಹಾಡಹಗಲೇ ಮಹಿಳೆಯಿಂದ ಚಿನ್ನಾಭರಣ ದೋಚಿ ಪರಾರಿಯಾಗಿದ್ದ ಆರೋಪಿಯನ್ನು ಜಯನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕಾರ್ತಿಕ್ ಅಲಿಯಾಸ್ ಜಾಕ್ ಲೊಡ್ಡೆ (19) ಬಂಧಿತ.

ಆರೋಪಿಯಿಂದ 58 ಗ್ರಾಂ ಚಿನ್ನಾಭರಣ ಹಾಗೂ ಸ್ಕೂಟರ್ ವಶಪಡಿಸಿಕೊಳ್ಳಲಾಗಿದೆ. ಮೂರು ಪ್ರಕರಣಗಳು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಜರಗನಹಳ್ಳಿ ನಿವಾಸಿ ತ್ರಿವೇಣಿ ಎಂಬುವರ ಮಾವ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದರು. ಚಿಕಿತ್ಸೆಗೆ ಹಣ ಇರಲಿಲ್ಲ. ಡಿ.30ರ ಮಧ್ಯಾಹ್ನ ಚಿನ್ನಾಭರಣ ತೆಗೆದುಕೊಂಡು ಗಿರವಿ ಅಂಗಡಿಗೆ ಹೋಗುತ್ತಿದ್ದರು. ಸ್ಕೂಟರ್​ನಲ್ಲಿ ಹಿಂಬಾಲಿಸಿ ಬಂದಿದ್ದ ಖದೀಮ ಹಲ್ಲೆ ನಡೆಸಿ ಚಿನ್ನಾಭರಣವಿದ್ದ ಬ್ಯಾಗ್ ಮತ್ತು ಮೊಬೈಲ್ ದೋಚಿ ಪರಾರಿಯಾಗಿದ್ದ. ಸ್ಥಳದಲ್ಲಿದ್ದ ಸಿಸಿ ಕ್ಯಾಮರಾ ಪರಿಶೀಲಿಸಿದಾಗ ಆರೋಪಿಯ ಮುಖಚಹರೆ ದಾಖಲಾಗಿತ್ತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net