ಮಹಿಳೆ ಸರ ಕಸಿದು ಕಳ್ಳ ಪರಾರಿ

Published on

ಮೈಸೂರು: ತಾಲೂಕಿನ ಆಯರಹಳ್ಳಿ ಗ್ರಾಮದಲ್ಲಿ ಜಮೀನಿಗೆ ತೆರಳುತ್ತಿದ್ದ ಪುಟ್ಟತಾಯಮ್ಮ ಅವರ ಕೊರಳಿನಲ್ಲಿದ್ದ 80 ಸಾವಿರ ರೂ. ವೌಲ್ಯದ ಚಿನ್ನದ ಸರವನ್ನು ಬೈಕಿನಲ್ಲಿ ಬಂದ ಸರಗಳ್ಳರು ಕಸಿದು ಪರಾರಿಯಾಗಿದ್ದಾರೆ.

ಪುಟ್ಟತಾಯಮ್ಮ ಅವರು ಜೂ.23ರಂದು ಮಧ್ಯಾಹ್ನ 12 ಗಂಟೆ ಸಮಯದಲ್ಲಿ ಪತಿಗೆ ಊಟ ತೆಗೆದುಕೊಂಡು ಆಯರಹಳ್ಳಿ-ಹದಿನಾರು ಗ್ರಾಮದ ರಸ್ತೆಯಲ್ಲಿ ತೆರಳುತ್ತಿದ್ದರು. ಈ ವೇಳೆ ಬೈಕ್‌ನಲ್ಲಿ ಹಿಂದಿನಿಂದ ಬಂದ ದುಷ್ಕರ್ಮಿಗಳು ಅವರ ಕುತ್ತಿಗೆಯಲ್ಲಿ ಇದ್ದ ಸರ ಕಸಿದುಕೊಂಡು ಪರಾರಿಯಾಗಿದ್ದಾರೆ. ಈ ಬಗ್ಗೆ ವರುಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net