

ಇಳಕಲ್ಲ(ಗ್ರಾ): ಹುನಗುಂದ ವಿಧಾನಸಭೆ ಮತಕ್ಷೇತ್ರದಲ್ಲಿ ಕಳ್ಳರು ಯಾರು? ಸುಳ್ಳರು ಯಾರು? ಎಂಬುದನ್ನು ಜನರೇ ನಿರ್ಧರಿಸಲಿ ಎಂದು ಮಾಜಿ ಶಾಸಕ ದೊಡ್ಡನಗೌಡ ಪಾಟೀಲ ಹೇಳಿದರು.
ಇತ್ತೀಚೆಗೆ ಬಸವೇಶ್ವರ ಸರ್ಕಲ್‌ನಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಶಾಸಕ ವಿಜಯಾನಂದ ಕಾಶಪ್ಪನವರ ಮಾಡಿದ ಆರೋಪಕ್ಕೆ ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿ ನಡೆಸಿ ಪ್ರತಿಕ್ರಿಯಿಸಿದರು. ತಾಲೂಕಿನ ಪ್ರತಿಯೊಂದು ಆಡಳಿತದಲ್ಲಿ ಹಸ್ತಕ್ಷೇಪ ಮಾಡುತ್ತ,ಕಮಿಷನ್ ವ್ಯವಹಾರ ಮಾಡುವ ಜತೆಗೆ ಇತ್ತೀಚೆಗೆ ನಡೆದ ಹಜರತ್ ಸೈಯದ್ ಷಾ ಮುರ್ತುಜಾ ಖಾದ್ರಿ ದರ್ಗಾ ಉರುಸ್‌ನಲ್ಲಿಯೂ ತಹಸೀಲ್ದಾರ್ ಮೂಲಕ ಭ್ರಷ್ಟಾಚಾರ ಮಾಡಿದ್ದಾರೆ ಎಂದು ಆರೋಪಿಸಿದರು.
ಬಿಜೆಪಿ ಗ್ರಾಮೀಣ ಮಂಡಲದ ಅಧ್ಯಕ್ಷ ಮಹಾಂತಗೌಡ ಪಾಟೀಲ ತೊಂಡಿಹಾಳ, ನಗರಸಭೆ ಸದಸ್ಯರಾದ ಚಂದ್ರಶೇಖರ ಏಕಬೋಟೆ, ಸುಗುರೇಶ ನಾಗಲೋಟಿ ಮತ್ತಿತರರಿದ್ದರು.