ಕೃಷಿ ಮಹಿಳೆ ಮಾಂಗಲ್ಯ ಸರ ಕಿತ್ತು ಪರಾರಿ ಆದ ಕಳ್ಳರು

UDP-CHAIN SNATCH
Published on

ರಾಮನಗರ: ತಮ್ಮ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯ ಚಿನ್ನದ ಸರವನ್ನು ಕಸಿದು ಪರಾರಿ ಆಗಿರುವ ಘಟನೆ ತಾಲೂಕಿನ ತಡಿಕವಾಗಿಲು ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಸುಬ್ಬ ಲಕ್ಷ್ಮಮ್ಮ ಎಂಬುವರು ಶುಕ್ರವಾರ ತಮ್ಮ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಹಿಂಬದಿಯಿಂದ ಬಂದ ವ್ಯಕ್ತಿಯೊಬ್ಬ ಕುತ್ತಿಗೆಯಲ್ಲಿದ್ದ ಸುಮಾರು 40 ಗ್ರಾಂ ಚಿನ್ನದ ಸರವನ್ನು ಕಸಿದುಕೊಂಡು ಓಡಿ ಹೋಗಿದ್ದಾನೆ. ನಂತರ ರಸ್ತೆಯಲ್ಲಿ ಕಾಯುತ್ತಿದ್ದ ವ್ಯಕ್ತಿಯೊಬ್ಬರ ಬೈಕ್ ನಲ್ಲಿ ಅಲ್ಲಿಂದ ಪರಾರಿ ಆಗಿದ್ದಾನೆ.

ಈ ಸಂಬಂಧ ಸುಬ್ಬಲಕ್ಷ್ಮಮ್ಮ ರಾಮನಗರ ಗ್ರಾಮಾಂತರ ಪೊಲೀಸರಿಗೆ ದೂರು ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net