

ಗುತ್ತಲ: ಪಟ್ಟಣದ ಸ್ಟೇಟ್ ಬ್ಯಾಂಕ್ನಲ್ಲಿ ಹಣ ಡ್ರಾ ಮಾಡಿ ಬೈಕ್ನಲ್ಲಿ ಹೊರಡುತ್ತಿದ್ದ ನಿವೃತ್ತ ಶಿಕ್ಷಕರೊಬ್ಬರ 2 ಲಕ್ಷ ರೂ.ಗಳಿದ್ದ ಬ್ಯಾಗ್ ಕಳವಾದ ಘಟನೆ ಸೋಮವಾರ ನಡೆದಿದೆ.
ಪಟ್ಟಣದ ನಿವೃತ್ತ ಶಿಕ್ಷಕ ಪಿ.ಎನ್. ನೆಗಳೂರಮಠ ಅವರ ಹಣವೇ ಕಳುವಾಗಿದೆ.
ಸ್ಟೇಟ್ ಬ್ಯಾಂಕ್ ಶಾಖೆಯಲ್ಲಿ 2 ಲಕ್ಷ ರೂ. ಡ್ರಾ ಮಾಡಿಕೊಂಡು ಬೈಕ್ನ ಸೈಡ್ ಬ್ಯಾಗ್ನಲ್ಲಿಟ್ಟು ಬೈಕ್ ಸ್ಟಾರ್ಟ್ ಮಾಡುವುದರೊಳಗೆ ಕಳ್ಳರು ಹಣ ಎಗರಿಸಿದ್ದಾರೆ. ಕೂಡಲೇ ಪೊಲೀಸ್ ಠಾಣೆಗೆ ಪೋನಾಯಿಸಿ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಎಸ್ಬಿಐ ಬ್ಯಾಂಕ್ ಸೇರಿದಂತೆ ವಿವಿಧ ಅಂಗಡಿಗಳಲ್ಲಿನ ಸಿಸಿ ಟಿವಿ ದೃಶ್ಯ ಪರಿಶೀಲಿಸಿದ್ದಾರೆ.
ಇದಕ್ಕೂ ಮುನ್ನ ನೆಗಳೂರಮಠ ಅವರು ತಮ್ಮ ಬ್ಯಾಂಕ್ ಖಾತೆಯಿಂದ 48,945 ರೂ. ಕಡಿತಗೊಂಡಿರುವ ಬಗೆಗೆ ಸಂದೇಶ ಬಂದಿರುವುದನ್ನು ನೋಡಿ ಬ್ಯಾಂಕ್ಗೆ ತೆರಳಿ ವಿಚಾರಿಸಿದ್ದಾರೆ. ಆಗ ಬ್ಯಾಂಕ್ನವರು ಅವರ ಖಾತೆ ಪರಿಶೀಲಿಸಿ, ಆ ರೀತಿ ಯಾವುದೇ ಹಣ ನಿಮ್ಮ ಖಾತೆಯಿಂದ ಕಡಿತವಾಗಿಲ್ಲ ಎಂದು ತಿಳಿಸಿದ್ದಾರೆ.
ಈ ಕುರಿತು ಗುತ್ತಲ ಠಾಣೆಯಲ್ಲಿ ಪ್ರಕರಣದ ದಾಖಲಾಗಿದೆ.