ತಿಮ್ಮಲಾಪುರದಲ್ಲಿ ಫೆ.20ರಂದು ಬಳ್ಳಾರಿ ಡಿಸಿ ಪವನಕುಮಾರ್ ಮಾಲಪಾಟಿ ಗ್ರಾಮವಾಸ್ತವ್ಯ

Ballari DC Pavan Kumar Malapati
ಬಳ್ಳಾರಿ ಡಿಸಿ ಪವನಕುಮಾರ್ ಮಾಲಪಾಟಿ.
Published on

ಬಳ್ಳಾರಿ: ಹೊಸಪೇಟೆ ತಾಲೂಕು ಮರಿಯಮ್ಮನಹಳ್ಳಿ ಹೋಬಳಿ ಚಿಲಕನಹಟ್ಟಿ ಗ್ರಾಪಂ ವ್ಯಾಪ್ತಿಯ ತಿಮ್ಮಲಾಪುರದಲ್ಲಿ ಫೆ.20ರಂದು ಗ್ರಾಮವಾಸ್ತವ್ಯ ಮಾಡಲಿದ್ದೇನೆ ಎಂದು ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ ಹೇಳಿದರು.

ನಗರದಲ್ಲಿ ಮಂಗಳವಾರ ಸುದ್ದಿಗೊಷ್ಠಿಯಲ್ಲಿ ಮಾತನಾಡಿದರು. ಗ್ರಾಮೀಣ ಜನರ ಮನವಿ ಆಲಿಸಿ ಸ್ಥಳದಲ್ಲೇ ಬಗೆಹರಿಸಲು ಪ್ರಯತ್ನಿಸುತ್ತೇನೆ. ವೃದ್ಧರು, ಅಂಗವಿಕಲರು, ನಿರ್ಗತಿಕರು, ವಿಧವೆಯರ ಗುರುತಿಸಿ ಪಿಂಚಣಿ ಸೌಲಭ್ಯ ಪಡೆಯದಿದ್ದರೆ ವಿವರ, ದಾಖಲೆ ಸಂಗ್ರಹಿಸಿ ಮಾಸಾಶನಕ್ಕೆ ವ್ಯವಸ್ಥೆ ಮಾಡಲಾಗುವುದು ಎಂದರು. ಗ್ರಾಮದಲ್ಲಿ ಸರ್ಕಾರಿ ಜಮೀನು ಹಾಗೂ ಸಾರ್ವಜನಿಕ ಉದ್ದೇಶಗಳಿಗೆ ಕಾಯ್ದಿರಿಸಿದ ಜಾಗ ಒತ್ತುವರಿಯಾಗಿದ್ದಲ್ಲಿ ತೆರವಿಗೆ ಕ್ರಮ ಕೈಗೊಳ್ಳಲಾಗುವುದು. ಕುಡಿವ ನೀರಿನ ಸಮಸ್ಯೆ ಸೇರಿ ಮೂಲಸೌಲಭ್ಯಗಳ ಕೊರತೆ ಇದ್ದರೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಗುವುದು ಎಂದು ತಿಳಿಸಿದರು. ಎಸ್ಪಿ ಸೈದುಲು ಅದಾವತ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net