

ಸಿಂಧನೂರು: ನಗರದ ಸುಕಾಲಪೇಟೆಯಿಂದ ತಿಮ್ಮಾಪುರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಹಾಳಾಗಿದ್ದು, ಕೂಡಲೇ ಅಭಿವೃದ್ಧಿಪಡಿಸಬೇಕೆಂದು ಒತ್ತಾಯಿಸಿ ತಹಸೀಲ್ದಾರ್ ಅರುಣ್ ದೇಸಾಯಿಗೆ ಗ್ರಾಮಸ್ಥರು ಸೋಮವಾರ ಮನವಿ ಸಲ್ಲಿಸಿದರು.
ಇದನ್ನೂ ಓದಿ: ಹೊಲರಸ್ತೆ ನಿರ್ಮಿಸಿ ರೈತರಿಗೆ ಅನುಕೂಲ ಕಲ್ಪಿಸಿ
ತುಂಗಭದ್ರಾ ಕಾಡಾ ಮತ್ತು ಎಂಪಿ ಅನುದಾನದಲ್ಲಿ ರಸ್ತೆ ನಿರ್ಮಾಣ ಮಾಡಲಾಗಿದೆ. ಆದರೆ, ಈ ಮಾರ್ಗದಲ್ಲಿನ ಕೆಲ ರೈತರು ರಸ್ತೆಯನ್ನು ಹಾಳು ಮಾಡಿ ಸಂಚಾರಕ್ಕೆ ತೊಂದರೆ ಉಂಟು ಮಾಡಿದ್ದಾರೆ. ಇದರಿಂದಾಗಿ ರೈತರು ಹೊಲಗಳಿಗೆ ತೆರಳಲು ತೊಂದರೆಯಾಗಿದೆ. ಹಾಗಾಗಿ ಆದಷ್ಟು ಶೀಘ್ರ ಸರ್ವೇ ಮಾಡಿಸಿ ಈ ದಾರಿ ಸಮಸ್ಯೆಯನ್ನು ಬಗೆಹರಿಸಬೇಕೆಂದು ಒತ್ತಾಯಿಸಿದರು.