

ಮಹಾಲಿಂಗಪುರ: ಪಟ್ಟಣ ಸಮೀಪದ ಹಳೇ ನಂದಗಾವ ಗ್ರಾಮದ ಸುತ್ತ ಘಟಪ್ರಭೆ ಆವರಿಸಿದ್ದು, ಅಲ್ಲಿನ ನಿವಾಸಿಗಳನ್ನು ಹೊಸ ನಂದಗಾವ ಪ್ರದೇಶಕ್ಕೆ ಸ್ಥಳಾಂತರಿಸಲಾಗಿದೆ.
ಸೋಮವಾರ ನೆರೆಪೀಡಿತ ನಂದಗಾವಕ್ಕೆ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪೂರ, ವಿಧಾನ ಪರಿಷತ್ ಸದಸ್ಯೆ ಉಮಾಶ್ರೀ ಭೇಟಿ ನೀಡಿ ನೆರೆ ಪರಿಸ್ಥಿತಿ ಅವಲೋಕಿಸಿದರು.
ಬಳಿಕ ಕಾಳಜಿ ಕೇಂದ್ರಕ್ಕೆ ತೆರಳಿ ಅಲ್ಲಿನ ವ್ಯವಸ್ಥೆ ವೀಕ್ಷಿಸಿದರು. ಗ್ರಾಮಸ್ಥರು ಹಾಗೂ ಜಾನುವಾರುಗಳಿಗೆ ಆಹಾರ, ಮೂಲ ಸೌಲಭ್ಯಗಳ ಕೊರತೆಯಾಗದಂತೆ ನೋಡಿಕೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು. ಕಾಂಗ್ರೆಸ್ ಮುಖಂಡ ಸಿದ್ದು ಕೊಣ್ಣೂರ, ವಿಠ್ಠಲ ಹೊಸಮನಿ ಇತರರಿದ್ದರು.