

ವಿಜಯಪುರ : ಶಿವಮೊಗ್ಗದಲ್ಲಿ ಈಚೆಗೆ ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ನಡೆದ ರಾಜ್ಯಮಟ್ಟದ ಕರಾಟೆ ಸ್ಪರ್ಧೆಯಲ್ಲಿ ವಿಜಯಪುರದ ಸೇಂಟ್ ಜೋಸೆಫ್ ಪಿಯು ಕಾಲೇಜಿನ ವಿದ್ಯಾರ್ಥಿನಿ ವೈಷ್ಣವಿ ಬಿಜ್ಜೂರ ತೃತೀಯ ಸ್ಥಾನ ಪಡೆದಿದ್ದಾರೆ.
ವಿದ್ಯಾರ್ಥಿನಿಯ ಸಾಧನೆಗೆ ಸಂಸ್ಥೆಯ ಮುಖ್ಯಸ್ಥೆ ಅನಲೀಸಾ ಬಾಸ್ಕೋ, ಉಪ ಪ್ರಾಚಾರ್ಯ ಜಯತೀರ್ಥ ಪಂಢರಿ, ದೈಹಿಕ ಶಿಕ್ಷಣ ಶಿಕ್ಷಕಿ ಪರ್ವೀನಬಾನು ಚಂದರಕಿ ಹಾಗೂ ಆಡಳಿತ ಮಂಡಳಿ ಹರ್ಷವ್ಯಕ್ತಪಡಿಸಿದ್ದಾರೆ.