

ಪುತ್ತೂರು ಗ್ರಾಮಾಂತರ : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ, ದ.ಕ.ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು ಮಹಾನಗರ ಪಾಲಿಕೆ, ನೆಹರು ಯುವ ಕೇಂದ್ರ, ದಕ್ಷಿಣ ಕನ್ನಡ ಜಿಲ್ಲಾ ಯುವಜನ ಒಕ್ಕೂಟ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕ್ರೀಡಾ ಸಂಸ್ಥೆಗಳ ಸಹಯೋಗದಲ್ಲಿ ಸೆಪ್ಟೆಂಬರ್ 28, 29ರಂದು ಮಂಗಳೂರಿನ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಮೈಸೂರು ವಿಭಾಗ ಮಟ್ಟದ ವೇಯ್ಟ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಪಾಣಾಜೆ ಗ್ರಾಮದ ಆರ್ಲಪದವಿನ ಮುಹಮ್ಮದ್ ಸಿಂಸಾರುಲ್ ಹಕ್ ತೃತೀಯ ಸ್ಥಾನ ಪಡೆದಿದ್ದಾರೆ. ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನ ವಿದ್ಯಾರ್ಥಿ. ಕರ್ನಾಟಕ ವಿಜ್ಞಾನ ಪರಿಷತ್ತು ದ.ಕ.ಜಿಲ್ಲಾಧ್ಯಕ್ಷ ಎಸ್.ಅಬೂಬಕರ್ ಹಾಜಿ ಆರ್ಲಪದವು ಮತ್ತು ಪಾತಿಮತ್ ಜುಹುರ ದಂಪತಿಯ ಪುತ್ರ.