ತೀರ್ಥಹಳ್ಳಿ ಬಿಕ್ಕಟ್ಟಿಗೆ ಪರಿಹಾರ: ಸುಂದರೇಶ್ ವಿಶ್ವಾಸ

Sundresh
Published on

ಶಿವಮೊಗ್ಗ: ತೀರ್ಥಹಳ್ಳಿ ಸ್ಥಳೀಯ ಸಂಸ್ಥೆಯಲ್ಲಿ ನಾವು ಬಹುಮತ ಪಡೆದಿದ್ದೇವೆ. ಅದಕ್ಕೆ ಕಿಮ್ಮನೆ ರತ್ನಾಕರ್ ಹಾಗೂ ಮಂಜುನಾಥ ಗೌಡ ಅವರೇ ಕಾರಣ. ಈಗ ಚುನಾವಣೆ ಸಮಯವಾದ್ದರಿಂದ ಇಬ್ಬರೂ ತಮ್ಮ ಸಾಮರ್ಥ್ಯ ಪ್ರದರ್ಶನಕ್ಕೆ ಮುಂದಾಗಿದ್ದಾರೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಚ್.ಎಸ್.ಸುಂದರೇಶ್ ಅಭಿಪ್ರಾಯಪಟ್ಟರು.

ಹೀಗಾಗಿ ಪ್ರತ್ಯೇಕ ಸಭೆಗಳು ನಡೆಯುತ್ತಿವೆ. ರಾಜಕೀಯದಲ್ಲಿ ಇದೆಲ್ಲವೂ ಸಾಮಾನ್ಯ. ಇನ್ನೊಂದು ವಾರದಲ್ಲಿ ತೀರ್ಥಹಳ್ಳಿ ಬಿಕ್ಕಟ್ಟಿಗೆ ಪರಿಹಾರ ಕಂಡುಕೊಳ್ಳುತ್ತೇವೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಶಿವಮೊಗ್ಗ ಕ್ಷೇತ್ರದ ಆಕಾಂಕ್ಷಿಗಳ ಅರ್ಜಿ ಪರಿಶೀಲಿಸಿದ ಬಳಿಕ ಪಕ್ಷದ ನಾಯಕರು ಮೂವರ ಹೆಸರನ್ನು ಅಂತಿಮ ಪಟ್ಟಿಗೆ ಸೇರ್ಪಡೆ ಮಾಡಿದ್ದಾರೆಂಬ ಮಾಹಿತಿಯಿದೆ. ಅದರಲ್ಲಿ ನನ್ನ ಹೆಸರೂ ಇರಬಹುದೆಂಬ ನಿರೀಕ್ಷೆ ಹಾಗೂ ವಿಶ್ವಾಸವಿದೆ ಎಂದು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net