

ಮಂಗಳೂರು: ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸುಮಾರು 30 ವರ್ಷ ಹಿಂದೆ ದಾಖಲಾದ ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿರುತ್ತಾರೆ.
ಮೂಲತಃ ಮಂಗಳೂರು ಕುಳಾಯಿ ನಿವಾಸಿ, ಪ್ರಸ್ತುತ ಪಲಿಮಾರಿನ ನಂದಿಕೂರಿನಲ್ಲಿ ವಾಸವಿರುವ ಮುಸ್ತಫಾ ಮೊಹಮ್ಮದ್ ಮುಸ್ತಫಾ(63) ಬಂಧಿತ ಆರೋಪಿ.
ಸುರತ್ಕಲ್ ಠಾಣಾ ವ್ಯಾಪ್ತಿಯಲ್ಲಿ 1993ನೇ ಇಸವಿಯಲ್ಲಿ ಮನೆಯೊಂದಕ್ಕೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಭಾಗಿಯಾಗಿ ನಂತರ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ. ಆರೋಪಿ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಎಸಿಪಿ ಪಿ.ಎ. ಹೆಗಡೆ, ಪೊಲೀಸ್ ನಿರೀಕ್ಷಕ
ಶ್ಯಾಮ್ ಸುಂದರ್, ಪಿಎಸ್‌ಐ ಸುದೀಪ್ ಹಾಗೂ ಸಿಸಿಬಿ ಸಿಬ್ಬಂದಿ ಇದ್ದರು.