5, 6ಕ್ಕೆ ತಿರುವೈಲು ಸರ್ಕಾರಿ ಶಾಲೆ ಶತಮಾನೋತ್ಸವ

Gur_Thiruvail School
Published on

ಗುರುಪುರ: ತಿರುವೈಲು ದ.ಕ.ಜಿ.ಪಂ. ಮಾದರಿ ಕನ್ನಡ ಮತ್ತು ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆ ‘ಶತಮಾನೋತ್ಸವ ಸಂಭ್ರಮ’, ಶತಮಾನೋತ್ಸವ ಕಟ್ಟಡ ಉದ್ಘಾಟನಾ ಕಾರ್ಯಕ್ರಮ ಏ.5, 6ರಂದು ಶಾಲಾ ಆವರಣದಲ್ಲಿ ನಡೆಯಲಿದೆ.

ಏ.5ರಂದು ಬೆಳಗ್ಗೆ 9.30ಕ್ಕೆ ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ಶತಮಾನೋತ್ಸವ ಭವನ, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸಭಾ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮಂಗಳೂರು ಉತ್ತರ ಶಾಸಕ ಡಾ.ಭರತ್ ಶೆಟ್ಟಿ ಅಧ್ಯಕ್ಷತೆ ವಹಿಸುವರು. ಎಂಎಲ್‌ಸಿ ಐವನ್ ಡಿಸೋಜ ಸ್ಮರಣ ಸಂಚಿಕೆ ಬಿಡುಗಡೆ ಮಾಡಲಿದ್ದಾರೆ. ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಅಧ್ಯಕ್ಷ ಡಾ.ಎಂ.ಮೋಹನ್ ಆಳ್ವ ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಬಂಟ್ವಾಳ ಶಾಸಕ ರಾಜೇಶ್ ನಾಯ್ಕ, ಎಂಎಲ್‌ಸಿ ಮಂಜುನಾಥ ಭಂಡಾರಿ, ಸೀತಾರಾಮ ಜಾಣು ಶೆಟ್ಟಿ, ತಾರನಾಥ ಗಟ್ಟಿ, ಜೋಕಿಂ ಸ್ಟಾನ್ಲಿ ಅಲ್ವಾರಿಸ್, ಉಮರ್ ಯು.ಎಚ್., ಸದಾನಂದ ಮಾವಜಿ, ಡಾ.ಆನಂದ, ಗೋವಿಂದ ಮಡಿವಾಳ, ಎಚ್.ಆರ್.ಈಶ್ವರ್, ಜ್ಞಾನೇಶ್ ಎಂ.ಪಿ., ಸುಷ್ಮಾ ವಿ.ಕಿಣಿ, ಎ.ಮನೋಜ್ ಕುಮಾರ್ ಪಾಲ್ಗೊಳ್ಳಲಿದ್ದಾರೆ.

ಬೆಳಗ್ಗೆ 10.30ರಿಂದ 1 ಗಂಟೆ ವರೆಗೆ ಶಾಲೆಯಲ್ಲಿ ಸೇವೆ ಸಲ್ಲಿಸಿರುವ ಗುರುಗಳಿಗೆ ‘ಗುರುವಂದನೆ’, 2ರಿಂದ ‘ಮಕ್ಕಳ ಸರ್ವತೋಮುಖ ಅಭಿವೃದ್ಧಿಯಲ್ಲಿ ಶಿಕ್ಷಕರು ಮತ್ತು ಪೋಷಕರ ಪಾತ್ರ’ ಕುರಿತು ಸಂವಾದ ಕಾರ್ಯಕ್ರಮ ನಡೆಯಲಿದೆ. ಎನ್.ಆರ್.ದಾಮೋದರ ಶರ್ಮ ಸಂಪನ್ಮೂಲ ವ್ಯಕ್ತಿಗಳಾಗಿ ಉಪಸ್ಥಿತರಿರುವರು.

ಸಭಾ ಕಾರ್ಯಕ್ರಮ, ಸನ್ಮಾನ: ಏ.5ರಂದು ಸಂಜೆ 5.30ರಿಂದ ನಡೆಯಲಿರುವ ಸಭಾ ಕಾರ್ಯಕ್ರಮದಲ್ಲಿ ಮೂಲ್ಕಿ-ಮೂಡಬಿದಿರೆ ಶಾಸಕ ಉಮಾನಾಥ ಕೋಟ್ಯಾನ್ ಅಧ್ಯಕ್ಷತೆ ವಹಿಸಲಿದ್ದಾರೆ. ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಎಂಎಲ್‌ಸಿಗಳಾದ ಎಸ್.ಎಲ್.ಭೋಜೇಗೌಡ, ಕಿಶೋರ್ ಬಿ.ಆರ್., ಪ್ರತಾಪಸಿಂಹ ನಾಯಕ್, ಮಮತಾ ಗಟ್ಟಿ, ಸದಾಶಿವ ಉಳ್ಳಾಲ, ಮಾಲಾ ಎನ್.ರಾವ್, ಡಾ.ಎಂ.ಪಿ.ಶ್ರೀನಾಥ್, ಎಚ್.ಎಂ.ರೇವಣ್ಣ, ಡಾ.ಸತೀಶ್ ಭಂಡಾರಿ, ಮಾಜಿ ಕಾರ್ಪೊರೇಟರ್ ಹೇಮಲತಾ ಆರ್.ಸಾಲ್ಯಾನ್, ರೋಹನ್ ಮೊಂತೆರೊ, ಚಂದ್ರಶೇಖರ ಭಟ್, ಅಬ್ದುಲ್ ಖಾದರ್ ಭಾಗವಹಿಸಲಿದ್ದಾರೆ. ಕರಾವಳಿ ಶಿಕ್ಷಣ ಸಂಸ್ಥೆ ಅಧ್ಯಕ್ಷ ಗಣೇಶ್ ರಾವ್ ಪ್ರಧಾನ ಭಾಷಣಕಾರಾಗಿದ್ದಾರೆ. ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ. ಸಂಜೆ 4ರಿಂದ ಸಾಂಸ್ಕೃತಿಕ ಕಾರ್ಯಕ್ರಮ, ಕೊಯಿಲ ವೈಷ್ಣವಿ ಕಲಾವಿದೆರ್ ತಂಡದಿಂದ ‘ಕುಸಲ್ದ ಗೌಜಿ’ ಪ್ರದರ್ಶನಗೊಳ್ಳಲಿದೆ.

ಸಮಾರೋಪ ಸಮಾರಂಭ

ಏ.6ರಂದು ಸಂಜೆ 5.30ಕ್ಕೆ ಸಮಾರೋಪ ಸಮಾರಂಭ ನಡೆಯಲಿದೆ. ಶಾಸಕ ಡಾ.ಭರತ್ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ಸಂಸದ ಕ್ಯಾ.ಬ್ರಿಜೇಶ್ ಚೌಟ, ಧರ್ಮಸ್ಥಳ ಕ್ಷೇತ್ರದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ, ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ, ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಎಂಎಲ್‌ಸಿ ಧನಂಜಯ ಸರ್ಜಿ, ಮಾಜಿ ಸಚಿವ ಕೃಷ್ಣ ಪಾಲೆಮಾರ್, ಜೇಮ್ಸ್ ಮೆಂಡೋನ್ಸ ವಾಮಂಜೂರು, ಎಂ.ಬಿ.ಪುರಾಣಿಕ್, ರಾಜಲಕ್ಷ್ಮೀ, ಮಹೇಶ್ ಹೊಳ್ಳ, ಲಿಲ್ಲಿ ಪಾಯ್ಸ, ಡಿ.ನಿತ್ಯಾನಂದ ಶೆಟ್ಟಿ ಭಾಗವಹಿಸಲಿದ್ದಾರೆ. ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಹಳೇ ವಿದ್ಯಾರ್ಥಿಗಳಿಗೆ ಸನ್ಮಾನ ನಡೆಯಲಿದೆ.

ಬೆಳಗ್ಗೆ 10ರಿಂದ ಕ್ಲಸ್ಟರ್ ಹಂತದ ಶಾಲೆಗಳಿಂದ ಮಕ್ಕಳ ಸಾಂಸ್ಕೃತಿಕ ಸ್ಪರ್ಧೆ, ಮಧ್ಯಾಹ್ನ 1 ಗಂಟೆಗೆ ಭೋಜನ, ಸಂಜೆ 3ಕ್ಕೆ ಹಳೇ ವಿದ್ಯಾರ್ಥಿಗಳ ಮಹಾ ಸಂಗಮ, 4ಕ್ಕೆ ಹಳೇ ವಿದ್ಯಾರ್ಥಿಗಳಿಂದ ‘ಮಹಿಷ ವಧೆ’ ಯಕ್ಷಗಾನ ಪ್ರದರ್ಶನ, ರಾತ್ರಿ 8.30ರಿಂದ ಹಳೇ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಲಿದೆ ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net