ದೇಶದ ಭವಿಷ್ಯ ನಿರ್ಧಾರ ಮಾಡುವ ಚುನಾವಣೆಯಿದು

3 ckm 4
ಚಿಕ್ಕಮಗಳೂರಿನ ಎಂಜಿ ರಸ್ತೆಯ ಗಣಪತಿ ದೇವಸ್ಥಾನದಲ್ಲಿ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಅವರ ನಾಮಪತ್ರ ಸಲ್ಲಿಕೆ ಹಿನ್ನೆಲೆಯಲ್ಲಿ ಬಿಜೆಪಿ ಎಸ್‌ಸಿ ಮೋರ್ಚಾ ಕಾರ್ಯಕರ್ತರು ವಿಶೇಷ ಪೂಜೆ ಸಲ್ಲಿಸಿದರು. ಕೆ.ಪಿ.ವೆಂಕಟೇಶ್, ಸೀತಾರಾಮ್ ಭರಣ್ಯ, ಹಂಪಯ್ಯ, ಲಕ್ಷö್ಮಣ್ ನಾಯಕ್, ಕೇಶವ್, ಮಂಜುನಾಥ ಮತ್ತಿತರರಿದ್ದರು.
Published on

ಚಿಕ್ಕಮಗಳೂರು: ಭಾರತದ ಸಂಸ್ಕೃತಿ ಪರಂಪರೆ ಉಳಿಯಲು ಹಾಗೂ ಪರಿಶಿಷ್ಟ ಜಾತಿ, ಪಂಗಡದ ಸಮುದಾಯವನ್ನು ಪ್ರಧಾನಿ ನರೇಂದ್ರ ಮೋದಿ ಹಂತ ಹಂತವಾಗಿ ಮೇಲಕ್ಕೆ ತರುತ್ತಿರುವುದನ್ನು ಮನಗಂಡು ಈ ಭಾರಿ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ ಬೆಂಬಲಿತ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ ಅವರಿಗೆ ಮತ ನೀಡುವಂತೆ ಬಿಜೆಪಿ ಎಸ್.ಸಿ ಮೋರ್ಚಾ ಅಧ್ಯಕ್ಷ ಕೆ.ಪಿ ವೆಂಕಟೇಶ್ ತಿಳಿಸಿದರು.

ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಅವರ ನಾಮಪತ್ರ ಸಲ್ಲಿಕೆ ಹಿನ್ನೆಲೆಯಲ್ಲಿ ನಗರದ ಎಂಜಿ ರಸ್ತೆಯ ಗಣಪತಿ ದೇವಸ್ಥಾನದಲ್ಲಿ ಬುಧವಾರ ಪೂಜೆ ಸಲ್ಲಿಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ದಲಿತ ಸಮುದಾಯಕ್ಕೆ ಪೂರಕವಾದ ಹತ್ತು ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ೫ ಪಂಚಧಾಮಗಳನ್ನು ತೀರ್ಥಕ್ಷೇತ್ರಗಳನ್ನಾಗಿ ಅಭಿವೃದ್ಧಿಪಡಿಸಿ ಪ್ರವಾಸೋಧ್ಯಮಕ್ಕೆ ಹೆಚ್ಚು ಒತ್ತು ನೀಡಿದೆ ಎಂದು ಹೇಳಿದರು.
ಬಡ ಕುಟುಂಬದಿAದ ಬಂದಿರುವ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ಅಗತ್ಯವಾಗಿರುವ ಮೂಲಸೌಕರ್ಯಗಳನ್ನು ಕೇಂದ್ರ ಸರ್ಕಾರದಿಂದ ಮಂಜೂರು ಮಾಡಿಸುವ ಜೊತೆಗೆ ಕ್ಷೇತ್ರದ ಬಡಜನರ ಸಮಸ್ಯೆಗೆ ಸ್ಪಂದಿಸಲಿದ್ದಾರೆ ಎಂದು ಭರವಸೆ ನೀಡಿದರು.
ಬಿಜೆಪಿ ಎಸ್‌ಸಿ ಮೋರ್ಚಾ ರಾಜ್ಯಕಾರ್ಯದರ್ಶಿ ಸೀತಾರಾಮ್ ಭರಣ್ಯ ಮಾತನಾಡಿ, ಏ. ೨೬ರಂದು ನಡೆಯಲಿರುವ ಲೋಕಸಭಾ ಚುನಾವಣೆ ದೇಶದ ಭವಷ್ಯ ನಿರ್ಧಾರ ಮಾಡುವ ಚುನಾವಣೆಯಾಗಿದೆ. ಗ್ಯಾರಂಟಿ ನಂಬಿ ಮತ ಹಾಕುವಂತ ಚುನಾವಣೆ ಇದಲ್ಲ. ಮತದಾರರು ಪ್ರಜ್ಞಾವಂತರಾಗಿದ್ದಾರೆ, ಡಾ. ಬಿ.ಆರ್.ಅಂಬೇಡ್ಕರ್ ಅವರ ಸಿದ್ಧಾಂತ, ಶಿಕ್ಷಣ, ಹೋರಾಟದಿಂದಾಗಿಯೇ ಸ್ವಾತಂತ್ರ ಭಾರತದಲ್ಲಿ ಜನ ಸುರಕ್ಷಿತರಾಗುತ್ತಿದ್ದಾರೆ ಎಂದು ಹೇಳಿದರು.
ಶಿಕ್ಷಿತ ಸಮುದಾಯ ದೇಶದ ಭವಿಷ್ಯ ಯಾರ ಕೈಯಲ್ಲಿರಬೇಕು ಎಂದು ಈಗಾಗಲೇ ನಿರ್ಧರಿಸಿದೆ. ಆದ್ದರಿಂದ ಈ ದೇಶದಾದ್ಯಂತ ೪೦೦ಕ್ಕಿಂತ ಹೆಚ್ಚು ಸ್ಥಾನಗಳಲ್ಲಿ ಬಿಜೆಪಿ-ಎನ್‌ಡಿಎ ಗೆಲುವು ಖಚಿತ. ಕೋಟ ಶ್ರೀನಿವಾಸ್ ಪೂಜಾರಿ ಬಿಜೆಪಿ ಅಭ್ಯರ್ಥಿ ಆಗಿರದೆ ಜನರ ಅಭ್ಯರ್ಥಿಯಾಗಿದ್ದಾರೆ ಎಂದು ತಿಳಿಸಿದರು.
ಜಗತ್ತಿನಲ್ಲಿ ಭಾರತವನ್ನು ನೋಡುವ ದೃಷ್ಟಿಕೋನ ಬದಲಾಗಿದೆ. ಜಾತಿಯ ಎಲ್ಲೆ ಮೀರಿ ದೇಶ ಉಳಿಯಬೇಕೆಂಬ ಏಕೈಕ ಉz್ದೆÃಶದಿಂದ ದಲಿತ ಸಮುದಾಯದ ಜನ ಬಿಜೆಪಿಯನ್ನು ಬೆಂಬಲಿಸಿ ಮತ ನೀಡಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಎಸ್‌ಸಿ ಮೋರ್ಚಾ ಮುಖಂಡರಾದ ಹಂಪಯ್ಯ, ಕೇಶವ್, ಮಂಜುನಾಥ, ರೇವನಾಥ್, ಜಗದೀಶ್, ಪ್ರದೀಪ್, ಗುರು, ಪ್ರಕಾಶ್, ಶಿವಪ್ರಸಾದ್ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net